ಕಲಾಸಿಪಾಳ್ಯ ಠಾಣೆಯ 7 ಪೊಲೀಸರಿಗೆ ಕೊರೊನಾ : ಇನ್ ಸ್ಪೆಕ್ಟರ್ ಸೇರಿದ 70 ಸಿಬ್ಬಂಧಿಗಳು ಕ್ವಾರಂಟೈನ್

0

ಬೆಂಗಳೂರು : ಕೊರೊನಾ ವೈರಸ್ ಮಹಾಮಾರಿ ಇದೀಗ ಕೊರೊನಾ ವಾರಿಯರ್ಸ್ ಗಳಿಗೆ ಅಟ್ಯಾಕ್ ಮಾಡುತ್ತಿದೆ. ಕಲಾಸಿಪಾಳ್ಯದ 7 ಮಂದಿ ಪೊಲೀಸ್ ಸಿಬ್ಬಂಧಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪೊಲೀಸ್ ಸಿಬ್ಬಂಧಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಕಲಾಸಿಪಾಳ್ಯದ ಲೇಡಿ ಕಾನ್ಸ್ಟೇಬಲ್ ಓರ್ವರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯ ಎಲ್ಲಾ ಸಿಬ್ಬಂಧಿಗಳನ್ನೂ ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಇದೀಗ ಕೊರೊನಾ ತಪಾಸಣಾ ವರದಿಯಲ್ಲಿ ಕಲಾಸಿಪಾಳ್ಯ ಠಾಣೆಯ 7 ಮಂದಿ ಪೊಲೀಸ್ ಸಿಬ್ಬಂಧಿಗಳಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಠಾಣೆಯ ಪೊಲೀಸ್ ಸಿಬ್ಬಂಧಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದ್ದು, ಸ್ಯಾನಿಟೈಸ್ ಮಾಡಲಾಗಿದೆ. ಇನ್ ಸ್ಪೆಕ್ಟರ್ ಈಗಾಗಲೇ ಸೆಲ್ಪ್ ಕ್ವಾರಂಟೈನ್ ನಲ್ಲಿದ್ದು, ಉಳಿದ 70 ಸಿಬ್ಬಂಧಿಗಳನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲೀಗ ಕೊರೊನಾ ಮಹಾಮಾರಿ ಪೊಲೀಸರಿಗೆ ಒಕ್ಕರಿಸಿಕೊಳ್ಳುತ್ತಿರುವುದು ಆತಂಕವನ್ನು ಮೂಡಿಸಿದೆ.

Leave A Reply

Your email address will not be published.