ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಮರಣ ಮೃದಂಗವನ್ನೇ ಬಾರಿಸಿದೆ. ರಾಜ್ಯದಲ್ಲಿ ಬರೋಬ್ಬರಿ 1839 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ರೆ, ಕೊರೊನಾ ಮರಣಕೇಕೆ ಹಾಕಿದೆ. ಇಂದು ಒಂದೇ ದಿನ 42 ಮಂದಿಯನ್ನು ಡೆಡ್ಲಿ ಕೊರೊನಾ ಸೋಂಕು ಬಲಿ ಪಡೆದಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 21 ಸಾವಿರದ ಗಡಿದಾಟಿದೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಆರ್ಭಟ ಮುಂದುವರಿದಿದೆ. ಬೆಂಗಳೂರಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಶತಕದ ಗಡಿದಾಟಿದ್ದು, 1,172 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅದ್ರಲ್ಲೂ ಒಂದೇ ದಿನ 24 ಮಂದಿ ಕೊರೊನಾ ಮಹಾಮಾರಿಯಿಂದ ಸಾವನ್ನಪ್ಪಿರುವುದು ಆತಂಕವನ್ನು ಮೂಡಿಸಿದ್ದು, ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹೆಮ್ಮಾರಿಯ ಆರ್ಭಟ ಹೆಚ್ಚಾಗಿದೆ. 75 ಮಂದಿಗೆ ಕೊರೊನಾ ಸೋಂಕು ಹೊಸದಾಗಿ ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ 1087ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ 4 ಮಂದಿಯನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದ್ದು, ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಅಲ್ಲದೇ ಬಳ್ಳಾರಿಯಲ್ಲಿಯೂ ಕೊರೊನಾ ಸೋಂಕು ಹೆಚ್ಚುತ್ತಿದ್ದು, 73 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಳಿದಂತೆ ಬೀದರ್ 51, ಧಾರವಾಡ 45, ರಾಯಚೂರು 41, ಮೈಸೂರು 38, ಕಲಬುರಗಿ 37, ವಿಜಯಪುರ 37, ಮಂಡ್ಯ 35, ಉತ್ತರ ಕನ್ನಡ 35, ಶಿವಮೊಗ್ಗ 31, ಹಾವೇರಿ 28, ಬೆಳಗಾವಿ 27, ಹಾಸನ 25, ಉಡುಪಿ 18, ಚಿಕ್ಕಬಳ್ಳಾಪುರ 12, ತುಮಕೂರು 12, ಬೆಂಗಳೂರು ಗ್ರಾಮಾಂತರ 11, ಕೋಲಾರ 11, ದಾವಣಗೆರೆ 7, ಚಾಮರಾಜನಗರ 5, ಗದಗ 4, ಕೊಪ್ಪಳ 3, ಚಿಕ್ಕಮಗಳೂರು 3, ರಾಮನಗರ 2 ಹಾಗೂ ಯಾದಗಿರಿಯಲ್ಲಿ 1 ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿಂದು 1839 ಕೊರೊನಾ ಪ್ರಕರಣ ದಾಖಲಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 21,549ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 439 ಮಂದು ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 9244 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಉಳಿದಂತೆ 11,966 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಮಹಾಮಾರಿ ಒಟ್ಟು 339 ಮಂದಿಯನ್ನು ಬಲಿಪಡೆದಿದೆ.