ರಾಜ್ಯದಲ್ಲಿ ಕೊರೋನಾ ಉಲ್ಬಣ: ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಮಹತ್ವದ ಸಭೆ ಕರೆದ ಕೆ.ಸುಧಾಕರ್‌

ಬೆಂಗಳೂರು: (Karnataka Corona outbreak) ಕಳೆದ ಎರಡು ತಿಂಗಳ ಹಿಂದೆ ರಾಜ್ಯದಲ್ಲಿ ಕೊರೋನಾ ಆತಂಕ ಸೃಷ್ಟಿಯಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿತ್ತು. ನಂತರ ಕೊರೋನಾ ಸೋಂಕು ಕಡಿಮೆಯಾದ ಹಿನ್ನಲೆಯಲ್ಲಿ ಸ್ವಲ್ಪ ಮಟ್ಟಿಗೆ ಆತಂಕ ಕಡಿಮೆಯಾಗಿತ್ತು. ಆದರೆ ಇದೀಗ ಮತ್ತೆ ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕು ಉಲ್ಬಣವಾಗಿದ್ದು, ಇದರಿಂದಾಗಿ ಮತ್ತೆ ಜನತೆಯಲ್ಲಿ ಆತಂಕ ಹೆಚ್ಚಳವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಸೋಂಕಿನ ಬಗ್ಗೆ ನಿಗಾವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದ್ದು, ಈ ಹಿನ್ನಲೆಯಲ್ಲಿ ನಾಳೆ ಕೆ. ಸುಧಾಕರ್‌ ನೇತ್ರತ್ವದಲ್ಲಿ ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಹೆಚ್‌3ಎನ್‌2 ಬಗ್ಗೆ ನಿಗಾವಹಿಸಲು ಕೆಂದ್ರ ಆರೋಗ್ಯ ಸಚಿವಾಲಯ ಸೂಚನೆಯನ್ನು ನೀಡಿದ್ದು, ಈ ಹಿನ್ನಲೆಯಲ್ಲಿ ನಾಳೆ ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ ಸೋಂಕಿನ ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಿರುವುದಾಗಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿಧಾಸೌಧ ಆವರಣದಲ್ಲಿ ಸೈಕಲ್‌ ಜಾಥಾಗೆ ಜಾಲನೆ ನೀಡಿ ಬಳಿಕ ಸುಧಾಕರ್‌ ಈ ಬಗ್ಗೆ ತಿಳಿಸಿದ್ದಾರೆ. ರೋಗ ಲಕ್ಷಣಗಳಿಂದಾಗಿ ಕೆಲವರಲ್ಲಿ ಕೆಮ್ಮು ಉಂಟಾಗಿರುವ ಮಾಹಿತಿಗಳು ಬಂದಿದ್ದು, ಈ ಸಂಬಂಧ ಸೋಂಕು ತಡೆಗೆ ತೆಗೆದುಕೊಳ್ಳಬೇಕಾದ ಎಲ್ಲಾ ರೀತಿಯ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಏರುತ್ತಿದ್ದು, ಮಾರ್ಚ್ 04 ರಂದು ರಾಜ್ಯದಲ್ಲಿ 95 ಪ್ರಕರಣಗಳು ಹಾಗೂ ಬೆಂಗಳೂರಿನಲ್ಲಿ 79 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಸರಿಸುಮಾರು 100 ದಿನಗಳ ನಂತರ ಮತ್ತೆ ಬೆಂಗಳೂರು ಸೇರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗಿದೆ. ಈವರೆಗೆ ಒಟ್ಟು 391 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿದ್ದು, ವಾರದಲ್ಲಿ ಕೋವಿಡ್ ಪ್ರಕರಣ ಶೇಕಡವಾರು 2.44ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : COVID-19 ಹುಟ್ಟಿಕೊಂಡಿದ್ದು ಎಲ್ಲಿಂದ? ಇಲ್ಲಿದೆ ಸಾಂಕ್ರಾಮಿಕ ರೋಗದ ಬಗ್ಗೆ ಒಂದು ಸಣ್ಣ ನೋಟ

Karnataka Corona outbreak: Corona outbreak in the state: K. Sudhakar has called an important meeting tomorrow as a precautionary measure

Comments are closed.