Karnataka extends Covid rules :ಕೋವಿಡ್​ ಮಾರ್ಗಸೂಚಿ ಪಾಲನೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಪ್ರಸ್ತುತ ರಾಜ್ಯದಲ್ಲಿ ಜಾರಿಯಲ್ಲಿರುವ ಕೋವಿಡ್​ ಮಾರ್ಗಸೂಚಿಯು ಈ ತಿಂಗಳ ಅಂತ್ಯದವರೆಗೂ ಮುಂದುವರಿಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್​ ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕೋವಿಡ್​ ಮಾರ್ಗಸೂಚಿಗಳನ್ನು ಈ ತಿಂಗಳ (Karnataka extends Covid rules) ಅಂತ್ಯದವರೆಗೂ ಮುಂದುವರಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ತಡೆಗೆ ಜನರೇ ಸ್ವಯಂಪ್ರೇರಣೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಎಲ್ಲಿಗೇ ಹೋಗುವಾಗಲು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬೇಡಿ. ಹಾಗೂ ಕೊರೊನಾ ಲಸಿಕೆಗಳನ್ನು ಸಂಪೂರ್ಣವಾಗಿ ಸ್ವೀಕರಿಸಿ ಎಂದು ಜನರಲ್ಲಿ ಮನವಿ ಮಾಡಿದರು. ಅಲ್ಲದೇ ಓಮಿಕ್ರಾನ್​​ ಗಂಭೀರ ಲಕ್ಷಣಗಳನ್ನು ಹೊಂದಿಲ್ಲ ಎಂದು ಯಾರೂ ಕೊರೊನಾವನ್ನು ನಿರ್ಲಕ್ಷಿಸಬೇಡಿ ಎಂದು ಜನತೆಗೆ ಕಿವಿಮಾತನ್ನು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಒಳಗಾದವರಲ್ಲಿ ಐದು ಪ್ರತಿಶತ ಜನರು ಮಾತ್ರ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಆರೋಗ್ಯ ಸಿಬ್ಬಂದಿಯಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿ ಕೊಳ್ತಿದೆ. ಫೆಬ್ರವರಿ ಮೊದಲ ವಾರದ ವೇಳೆಗೆ ಕೊರೊನಾ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು. ಆದರೆ ಫೆಬ್ರವರಿ ಅಂತ್ಯದ ವೇಳೆಗೆ ಸೋಂಕಿನ ಸಂಖ್ಯೆ ಕಡಿಮೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಲಾಕ್​ಡೌನ್​ ವಿಚಾರವಾಗಿಯೂ ಮಾತನಾಡಿದ ಅವರು, ಕೊರೊನಾವನ್ನು ನಿಯಂತ್ರಿಸಲು ಲಾಕ್​ಡೌನ್​ ಮಾತ್ರ ಪರಿಹಾರವಲ್ಲ. ನಿನ್ನೆ ಸಿಎಂಗಳ ಜೊತೆ ಸಭೆ ನಡೆಸಿದ ಪ್ರಧಾನಿ ಕೂಡ ಲಾಕ್​ಡೌನ್​ ಒಂದೇ ಅಸ್ತ್ರವಲ್ಲ ಎಂದು ಹೇಳಿದ್ದಾರೆ. ನಾವು ಜನರ ಆರ್ಥಿಕ ಪರಿಸ್ಥಿತಿಯನ್ನೂ ಅರ್ಥ ಮಾಡಿಕೊಳ್ಳಬೇಕು. ಹೀಗಾಗಿ ಜನರಿಗೆ ಯಾವುದೇ ತೊಂದರೆ ಯಾಗದಂತೆ ನೋಡಿಕೊಳ್ಳಿ ಎಂದಿದ್ದಾರೆ ಎಂದು ಹೇಳಿದರು.

ಇದನ್ನು ಓದಿ : Nannamma Super Star samanvi : ನಟಿ ಅಮೃತಾ ನಾಯ್ಡು ಬಾಳಲ್ಲಿಇದೆಂತಾ ದುರಂತ : 2 ನೇ ಮಗು ಸಮನ್ವಿಯನ್ನು ಕಳೆದುಕೊಂಡ ಕಿರುತೆರೆ ನಟಿ

ಇದನ್ನೂ ಓದಿ : Karnataka Lockdown Fix : ಕರ್ನಾಟಕದಲ್ಲಿ 10 ದಿನಗಳ ಕಾಲ ಲಾಕ್‌ಡೌನ್‌ ಫಿಕ್ಸ್‌

ಇದನ್ನೂ ಓದಿ : ಗೋವಾದಲ್ಲಿ ಗಲೀ ಗಲೀ ಹುಡುಗಿ ಕಲ್ಯಾಣ : ಸದ್ದಿಲ್ಲದೇ ಮದುವೆಗೆ ಸಿದ್ಧವಾದ ಮೌನಿ ರಾಯ್

Karnataka extends Covid rules till January end says health minister Dr K Sudhakar

Comments are closed.