ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ವಿರುದ್ದ ಹೋರಾಟ ನಡೆಯುತ್ತಿದೆ. ಕೊರೊನಾ ಲಸಿಕೆ ಪಡೆಯುವಂತೆ ಜನರಿಗೆ ಪ್ರೋತ್ಸಾಹವನ್ನು ನೀಡಲಾಗುತ್ತಿದ್ದು, ಅದ್ರಲ್ಲೂ ಕರ್ನಾಟಕದಲ್ಲಿ ಕೊರೊನಾ ಲಸಿಕಾ ಅಭಿಯಾನ ಕೈಗೊಂಡಿದ್ದು, ಬರೋಬ್ಬರಿ 4 ಲಕ್ಷಕ್ಕೂ ಅಧಿಕ ಲಸಿಕೆಯನ್ನು ನೀಡುವ ಮೂಲಕ ಹೊಸ ಸಾಧನೆಯನ್ನು ಮಾಡಿದೆ.
ಕರ್ನಾಟಕದಲ್ಲಿ ಇದುವರೆಗೆ ಒಟ್ಟು 3,03,52,798 ಮಂದಿಗೆ ಮೊದಲ ಡೋಸ್ ಹಾಗೂ 96,53,772 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ನಿತ್ಯವೂ ಬರೋಬ್ಬರಿ 7,609 ಸರಕಾರಿ ಆಸ್ಪತ್ರೆ, 598 ಖಾಸಗಿ ಆಸ್ಪತ್ರೆ ಸೇರಿದಂತೆ ಸುಮಾರು 8,207 ಕೇಂದ್ರಗಳಲ್ಲಿ ಲಸಿಕೆ ನೀಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ.
ಕೊರೊನಾ ಎರಡನೇ ಅಲೆಯ ಅಬ್ಬರ ಕರ್ನಾಟಕದ ಗಡಿಭಾಗದ ಜಿಲ್ಲೆಗಳಲ್ಲಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಅಂತಹ ಜಿಲ್ಲೆಗಳಲ್ಲಿ ಕೊರೊನಾ ಟೆಸ್ಟಿಂಗ್ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಮಾತ್ರವಲ್ಲ ಲಸಿಕೆ ನೀಡುವ ಪ್ರಮಾಣವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಇನ್ನೊಂದೆಡೆಯಲ್ಲಿ ಸರಕಾರ ನಡೆಸುವ ಕೊರೊನಾ ಲಸಿಕಾ ಅಭಿಯಾನಕ್ಕೆ ಇದೀಗ ಖಾಸಗಿ ಸಂಘ ಸಂಸ್ಥೆಗಳು ಕೂಡ ಕೈ ಜೋಡಿಸಿವೆ.
ಕರ್ನಾಟಕ ಸರಕಾರ ಕೊರೊನಾ ಲಸಿಕೆ ನೀಡುವ ವಿಚಾರದಲ್ಲಿ ಈಗಾಗಲೇ ಮುನ್ನಡೆಯನ್ನು ಕಾಯ್ದುಕೊಂಡಿದೆ. ಸರಕಾರ ನೀಡಿರುವ ಅಂಕಿ ಅಂಶಗಳ ಪ್ರಕಾರ ಈಗಾಗಲೇ ಬರೋಬ್ಬರಿ ನಾಲ್ಕು ಕೋಟಿಗೂ ಅಧಿಕ ಮಂದಿಗೆ ಲಸಿಕೆಯನ್ನು ನೀಡಲಾಗಿದೆ. ಇನ್ನೊಂದೆಡೆಯಲ್ಲಿ ಲಸಿಕೆ ತೆಗೆದುಕೊಳ್ಳುವಂತೆ ಜನರಿಗೆ ಪ್ರೋತ್ಸಾಹವನ್ನು ನೀಡುವ ಕಾರ್ಯವೂ ನಡೆಯುತ್ತಿದೆ. ಇನ್ನು ಕೊರೊನಾ ಲಸಿಕೆಯನ್ನು ಪಡೆದುಕೊಳ್ಳುವವರು www.cowin.gov.in ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಬಹುದು. ಇಲ್ಲವಾದ್ರೆ ಸರಕಾರಿ ಆಸ್ಪತ್ರೆಗಳನ್ನು ಭೇಟಿ ಮಾಡಿ ಲಸಿಕೆಯನ್ನು ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ : No Vaccine No Ration : ಕೊರೊನಾ ಲಸಿಕೆ ಪಡೆಯದಿದ್ರೆ ಪಡಿತರ ಕಡಿತ : ಚರ್ಚೆ ಹುಟ್ಟು ಹಾಕಿದೆ ತಹಶೀಲ್ದಾರ್ ಆದೇಶ
ಇದನ್ನೂ ಓದಿ : ಅಂತರ್ ರಾಜ್ಯ ಪ್ರಯಾಣಕ್ಕೆ ಹೊಸ ಮಾರ್ಗಸೂಚಿ : ಇನ್ಮುಂದೆ ಅರ್‌ಟಿಪಿಸಿಆರ್ ಕಡ್ಡಾಯವಲ್ಲ !