STUDENTS RTPCR TEST : ಶಾಲಾ ಮಕ್ಕಳಿಗೆ ಕೊರೊನಾ ಟೆಸ್ಟ್‌ ಕಡ್ಡಾಯ : ಕೋವಿಡ್‌ ತಾಂತ್ರಿಕ ಸಮಿತಿ ಸಲಹೆ

ಬೆಂಗಳೂರು : ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿದೆ. ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಈ ನಡುವಲ್ಲೇ ಮೂರನೇ ಅಲೆಯ ಆತಂಕ ಎದುರಾಗಿದ್ದು, ಬಿಬಿಎಂಪಿ ಅಲರ್ಟ್‌ ಆಗಿದೆ. ಶಾಲಾ ಮಕ್ಕಳಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ, ಶಾಲಾ ಮಕ್ಕಳಿಗೆ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯಗೊಳಿಸಲು ಚಿಂತನೆ ನಡೆಸಿದೆ.

ಬಿಬಿಎಎಂ ಆಯುಕ್ತ ಗೌರವ್‌ ಗುಪ್ತಾ ನೇತೃತ್ವದಲ್ಲಿ ಬಿಬಿಎಂಪಿ ತಾಂತ್ರಿಕ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಶಾಲಾ ಮಕ್ಕಳಿಗೆ ಕೊರೊನಾ ತಡೆಯುವ ನಿಟ್ಟಿನಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಶಾಲಾ ಮಕ್ಕಳ ಮೇಲೆ ಎಚ್ಚರಿಕೆಯನ್ನು ವಹಿಸುವಂತೆ ಶಿಕ್ಷಣ ಇಲಾಖೆಗೆ ಸೂಚನೆಯನ್ನು ನೀಡಲಾಗಿದೆ. ಮಕ್ಕಳಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ ಎಲ್ಲಾ ಶಾಲೆಗಳಿಗೆ ನೋಡಲ್‌ ಅಧಿಕಾರಿಯನ್ನು ನಿಯೋಜನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಶಾಲೆಗೆ ಬರುವ ಮಕ್ಕಳ ಮೇಲೆ ತೀವ್ರ ನಿಗಾ ಇರಿಸಲಾಗುತ್ತಿದ್ದು, ಒಂದೊಮ್ಮೆ ಕೊರೊನಾ ಸೋಂಕು ಕಾಣಿಸಿಕೊಂಡ್ರೆ ಅಂತಹ ಮಕ್ಕಳ ಬಗ್ಗೆ ಆರೋಗ್ಯ ಕೇಂದ್ರಕ್ಕೆ ಮಾಹಿತಿಯನ್ನು ನೀಡಬೇಕು. ಅಲ್ಲದೇ ವೈದ್ಯರು ಮಕ್ಕಳ ಮನೆಗೆ ತೆರಳಿ ಪರೀಕ್ಷೆಯನ್ನು ನಡೆಸಬೇಕು. ಮಕ್ಕಳ ಸಂಪರ್ಕಿತರಿಗೆ ಕಡ್ಡಾಯವಾಗಿ ಲಸಿಕೆಯನ್ನು ನೀಡಬೇಕು. ಒಂದೊಮ್ಮೆ ಕೊರೊನಾ ಲಸಿಕೆ ಪಡೆದ ನಂತರವೂ ಕೊರೊನಾ ಸೋಂಕು ಕಾಣಿಸಿಕೊಂಡ್ರೆ ಅಂತಹವರಿಗೆ ಜಿನೋಮ್‌ ಟೆಸ್ಟ್‌ ಮಾಡಿಸುವಂತೆ ಬಿಬಿಎಂಪಿ ಕೋವಿಡ್‌ ತಾಂತ್ರಿಕ ಸಮಿತಿ ಸೂಚನೆಯನ್ನು ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಶಾಲೆಗಳು ಪುನರಾರಂಭಗೊಂಡಿವೆ. ಆದರೆ ಕೊರೊನಾ ವೈರಸ್‌ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಅದ್ರಲ್ಲೂ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕೊರೊನಾ ಸೋಂಕು ಏರಿಳಿತವನ್ನು ದಾಖಲಿಸುತ್ತಿದೆ. ಇನ್ನು ಕೇರಳದಿಂದ ಬೆಂಗಳೂರಿಗೆ ಅತೀ ಹೆಚ್ಚು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಹೀಗಾಗಿ ಹೊರ ರಾಜ್ಯದಿಂದ ಬರುವವರ ಮೇಲೆ ತೀವ್ರ ನಿಗಾ ಇರಿಸೋದು ಕಷ್ಟಸಾಧ್ಯವಾಗುತ್ತಿದೆ.

ಸಾಲದಕ್ಕೆ ಶಾಲಾ ಮಕ್ಕಳು ಸಾರ್ವಜನಿಕ ಸಾರಿಗೆಯನ್ನೇ ಅವಲಂಭಿಸಿ ಇರುವುದರಿಂದಾಗಿ ಕೊರೊನಾ ಸೋಂಕು ಶಾಲಾ ಮಕ್ಕಳಿಗೆ ಕಾಣಿಸಿಕೊಳ್ಳುವ ಆತಂಕವೂ ಇದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಇದನ್ನು ಓದಿ : ಶಾಲಾರಂಭದ ಬೆನ್ನಲ್ಲೇ ಮಡಿಕೇರಿಯಲ್ಲಿ 35 ವಿದ್ಯಾರ್ಥಿನಿರಿಗೆ ಕೊರೊನಾ ಸೋಂಕು

ಇದನ್ನೂ ಓದಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಶಾಲೆ, ಕಾಲೇಜು ಆರಂಭ

ಇದನ್ನೂ ಓದಿ : ರಾಜ್ಯದಲ್ಲಿ ಐದು ಸಾವಿರ ಶಿಕ್ಷಕರ ನೇಮಕ : ಸಚಿವ ಬಿ.ಸಿ.ನಾಗೇಶ್‌

( Corona Test Mandatory for School Children: BBMP Covid Technical Committee Advice )

Comments are closed.