ಕೊರೊನಾ ಲಸಿಕೆ ಪಡೆದವರಿಗಷ್ಟೇ ಜಿಲ್ಲಾಧಿಕಾರಿಗಳ ಭವನಕ್ಕೆ ಪ್ರವೇಶ

ಕೊಪ್ಪಳ : ಕೊರೊನಾ ವೈರಸ್‌ ಲಸಿಕೆ ಅಭಿಯಾನ ಜೋರಾಗಿ ನಡೆಯುತ್ತಿದೆ. ಅದ್ರಲ್ಲೂ ನಾಗಕರಿಕರ ಆರೋಗ್ಯದ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದ್ದು, ಕೊರೊನಾ ಲಸಿಕೆ ಪಡೆದವರಿಗೆ ಮಾತ್ರವೇ ಜಿಲ್ಲಾಧಿಕಾರಿಗಳ ಭವನಕ್ಕೆ ಪ್ರವೇಶ ನೀಡಲಾಗುತ್ತಿದೆ.

ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರು ಆದೇಶ ಹೊರಡಿಸಿದ ಬೆನ್ನಲ್ಲೇ, ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದಲ್ಲಿ ಆರೋಗ್ಯ ಇಲಾಖೆ ಜಿಲ್ಲಾಧಿಕಾರಿಗಳ ಕಚೇರಿಗೆ ಬರುವ ನಾಗರಿಕರಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ಕೆ ಮುಂದಾಗಿದೆ. ಕೇವಲ ಸಾರ್ವಜನಿಕರು ಮಾತ್ರವಲ್ಲದೇ ಕೊರೊನಾ ಮೂರನೇ ಅಲೆಯ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಲಸಿಕೆ ಪಡೆಯದ ಅಧಿಕಾರಿಗಳು, ಸಿಬ್ಬಂದಿಗಳಿಗೂ ಕೂಡ ಜಿಲ್ಲಾಡಳಿತ ಭವನದ ಪ್ರವೇಶಕ್ಕೆ ನಿಷೇಧ ಹೇರಿದೆ.

ಜಿಲ್ಲಾಧಿಕಾರಿಗಳ ಕಚೇರಿಗೆ ನಿತ್ಯವೂ 500 ರಿಂದ 1000 ಜನರು ಆಗಮಿಸುತ್ತಿದ್ದಾರೆ. ಹೀಗೆ ಕಚೇರಿಗೆ ಬರುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಲೇ ಬೇಕು. ಇಲ್ಲವಾದ್ರೆ ಮಾರ್ಗಸೂಚಿ ಯ ಅನ್ವಯ ದಂಡ ವಿಧಸಲಾಗುತ್ತದೆ. ಕೊರೊನಾ ಲಸಿಕೆ ಪಡೆದ ಪ್ರಯಾಣ ಪತ್ರ ನೀಡುವವರನ್ನು ಜಿಲ್ಲಾಧಿಕಾರಿಗಳ ಕಚೇರಿಯ ಒಳಗೆ ಬಿಡಲಾಗುತ್ತದೆ.

ನಿತ್ಯವೂ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಹೊರ ಭಾಗದಲ್ಲಿಯೇ ಲಸಿಕೆ ನೀಡುವ ಕಾರ್ಯವನ್ನು ಜಿಲ್ಲಾಡಳಿತ ಆಯೋಜನೆ ಮಾಡಿದ್ದು, ಸಾರ್ವಜನಿಕರಿಗೆ ಲಸಿಕೆಯ ಕುರಿತು ಅರಿವು ಮೂಡಿಸುವುದರ ಜೊತೆಗೆ ಲಸಿಕೆ ಪಡೆಯಲು ಹೆಣಗಾಡುವ ಸಾರ್ವಜನಿಕರಿಗೂ ಅನುಕೂಲವಾಗಲಿದೆ.

ಇದನ್ನೂ ಓದಿ : ಮಳೆಗಾಗಿ ಗ್ರಾಮಸ್ಥರಿಂದ ಅನಿಷ್ಠ ಆಚರಣೆ : ಅಪ್ತಾಪ್ತ ಬಾಲಕಿಯರ ಬೆತ್ತಲೆ ಮೆರವಣಿಗೆ !

ಇದನ್ನೂ ಓದಿ : ಕೇರಳದಲ್ಲಿ ನಿಫಾ ವೈರಸ್‌ ಆರ್ಭಟ : ದ.ಕ ಜಿಲ್ಲೆ ಗಡಿ ಭಾಗದಲ್ಲಿ ಕಟ್ಟೆಚ್ಚರ

( Koppala No entry if not vaccinated says dc vikas suralkar )

Comments are closed.