Students Corona : ಶಾಲಾರಂಭದ ಬೆನ್ನಲ್ಲೇ ಬಿಗ್‌ ಶಾಕ್‌ : 73 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ತುಮಕೂರು : ರಾಜ್ಯದಾದ್ಯಂತ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಂಡಿದೆ. ಕೊರೊನಾ ಭಯಬಿಟ್ಟು ಶಾಲೆಗಳಿಗೆ ಹಾಜರಾಗುತ್ತಿದ್ದಾರೆ. ಆದ್ರೀಗ ಶಾಲಾರಂಭಗೊಂಡು ತಿಂಗಳು ಕಳೆಯುವ ಮೊದಲೇ ಕೊರೊನಾ ಬಿಗ್‌ ಶಾಕ್‌ ಕೊಟ್ಟಿದೆ. ತುಮಕೂರು ಜಿಲ್ಲೆಯಲ್ಲಿ 73 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ವೈರಸ್‌ ಸೋಂಕಿನ ಕಡಿಮೆಯಾದ ಬೆನ್ನಲ್ಲೇ ರಾಜ್ಯದಾದ್ಯಂತ ಶಾಲೆಗಳು ಆರಂಭಗೊಂಡಿದ್ದು, 6 ರಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಶಾಲೆಗಳಲ್ಲಿ ಸರಕಾರ ಕೊರೊನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಆದರೀಗ ತುಮಕೂರು ಜಿಲ್ಲೆಯಲ್ಲಿನ ಹಲವು ಶಾಲೆಗಳಲ್ಲಿ ಮಕ್ಕಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಜಿಲ್ಲೆಯಲ್ಲಿ 6 ರಿಂದ 12ನೇ ತರಗತಿವರೆಗಿನ ಸುಮಾರು 73 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಡಿಡಿಪಿಐ ನಾಗೇಂದ್ರಪ್ಪ ತಿಳಿಸಿದ್ದಾರೆ.

ಕೊರೊನಾ ಸೋಂಕಿಗೆ ತುತ್ತಾಗಿರುವ ವಿದ್ಯಾರ್ಥಿಗಳಿಗೆ ಈಗಾಗಲೇ ಮನೆಯಲ್ಲಿಯೇ ಚಿಕಿತ್ಸೆ ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ. ಆದರೆ ವಿದ್ಯಾರ್ಥಿಗಳಿಗೆ ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ ಡಿಡಿಪಿಐ ತಿಳಿಸಿದ್ದಾರೆ. ಆದರೆ ಶಾಲಾರಂಭದ ಬೆನ್ನಲ್ಲೇ ಮಕ್ಕಳು ಕೊರೊನಾ ಸೋಂಕಿಗೆ ತುತ್ತಾಗುತ್ತಿರುವುದು ಆತಂಕವನ್ನು ಮೂಡಿಸಿದೆ.

ಇದನ್ನೂ ಓದಿ : ಶಾಲಾ ಮಕ್ಕಳಿಗೆ ಕೊರೊನಾ ಟೆಸ್ಟ್‌ ಕಡ್ಡಾಯ : ಕೋವಿಡ್‌ ತಾಂತ್ರಿಕ ಸಮಿತಿ ಸಲಹೆ

ಇದನ್ನೂ ಓದಿ : ಶಾಲಾರಂಭದ ಬೆನ್ನಲ್ಲೇ ಮಡಿಕೇರಿಯಲ್ಲಿ 35 ವಿದ್ಯಾರ್ಥಿನಿರಿಗೆ ಕೊರೊನಾ ಸೋಂಕು

ಇದನ್ನೂ ಓದಿ : ವಿದ್ಯಾರ್ಥಿ, ಪೋಷಕರಿಗೆ ಗುಡ್‌ನ್ಯೂಸ್‌ ಕೊಟ್ಟ ಹೈಕೋರ್ಟ್‌

( Corona shock on the back of School Reopen : Corona infection for 73 students )

Comments are closed.