ಕೊಲ್ಲೂರು ದೇವಳ ಪ್ರವೇಶಕ್ಕಿನ್ನು ಆಧಾರ್‌ ಕಡ್ಡಾಯ : ಕೇರಳ ಭಕ್ತರ ನಿಗಾಕ್ಕೆ ಉಡುಪಿ ಜಿಲ್ಲಾಡಳಿತದ ಹೊಸ ಆದೇಶ

ಉಡುಪಿ : ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳಲ್ಲೊಂದಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ನಿತ್ಯವೂ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇನ್ಮುಂದೆ ಕೊಲ್ಲೂರು ದೇವಾಲಯಕ್ಕೆ ಬರುವ ಭಕ್ತರಿಗೆ ಆಧಾರ್‌ ಕಡ್ಡಾಯಗೊಳಿಸಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಅದ್ರಲ್ಲೂ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಾನಕ್ಕೆ ಕೇರಳದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆಯ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ.

ಕೇರಳದಿಂದ ಉಡುಪಿ ಜಿಲ್ಲೆಗೆ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳಿಗೂ ಅಧಿಕ ಮೊದಲು ಮಾಡಿಸಿರುವ ಕೊರೊನಾ ನೆಗೆಟಿವ್‌ ರಿಪೋರ್ಟ್‌ ಕಡ್ಡಾಯಗೊಳಿಸಲಾಗಿದೆ. ಉಡುಪಿ ಜಿಲ್ಲೆಯಲ್ಲ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೇರಳ ರಾಜ್ಯದ ವಿದ್ಯಾರ್ಥಿಗಳು ನರ್ಸಿಂಗ್‌ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಾಗಿ ಕೊರೊನಾ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಇಂದು ನಡೆದ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ.

ಉಡುಪಿ ಜಿಲ್ಲಾಡಳಿತ ಈಗಾಗಲೇ ಕೊಲ್ಲೂರಿನಲ್ಲಿ ವಿಶೇಷ ಸಿಬ್ಬಂದಿಗಳನ್ನು ಆಧಾರ್‌ ತಪಾಸಣೆಗೆ ನಿಯೋಜನೆ ಮಾಡಿದೆ. ಕೊಲ್ಲೂರು ದೇವಸ್ಥಾನ ಪ್ರವೇಶ ಮಾಡಲು ಆಧಾರ್‌ ಕಾರ್ಡ್‌ ತೋರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದೊಮ್ಮೆ ಆಧಾರ್‌ ಕಾರ್ಡ್‌ ಇಲ್ಲದಿದ್ರೆ, ದೇವಸ್ಥಾನ ಪ್ರವೇಶವನ್ನು ನಿರಾಕರಿಸಲಾಗುತ್ತದೆ. ತಪಾಸಣಾ ಸಿಬ್ಬಂದಿಗಳು ಕಟ್ಟಿನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ.

ಇದನ್ನೂ ಓದಿ : ಓಣಂ ಹೆಸರಲ್ಲಿ ಕೊರೊನಾ ರೂಲ್ಸ್‌ ಬ್ರೇಕ್‌ : ಉಡುಪಿ ಜಿಲ್ಲಾಡಳಿತ ವಿರುದ್ದ ಆಕ್ರೋಶ : ಹಳೆಯ, ಹೊಸ ವಿಡಿಯೋ ವೈರಲ್‌

ಇದನ್ನೂ ಓದಿ : Weekend Curfew : ಉಡುಪಿಯಲ್ಲಿ ವೀಕೆಂಡ್‌ ಕರ್ಪ್ಯೂ : ಹೊಸ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಡಳಿತ

( Aadhaar mandatory for Kollur Mookambika Temple entry: Udupi dc Kurma Rao New Order )

Comments are closed.