ಅಕ್ಟೋಬರ್‌ನಲ್ಲಿ ಮಕ್ಕಳಿಗೆ ವ್ಯಾಕ್ಸಿನ್‌ : ಶಾಲೆಗಳಲ್ಲಿ ತುಂಬಾ ಎಚ್ಚರಿಕೆ ಅಗತ್ಯ : ಆರೋಗ್ಯ ಸಚಿವ ಸುಧಾಕರ್‌

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಹದಿನೆಂಟು ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ. ಅಕ್ಟೋಬರ್‌ ತಿಂಗಳಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯವನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೇಸ್‌ -3 ವ್ಯಾಕ್ಸಿನ್‌ ಮಕ್ಕಳಿಗೆ ನೀಡುವ ವಿಚಾರದಲ್ಲಿ ಅಂತಿಮ ಟ್ರಯಲ್‌ ನಡೆಯುತ್ತಿದೆ. ಕೇಂದ್ರ ಸರಕಾರ ಶೀಘ್ರದಲ್ಲಿಯೇ ವ್ಯಾಕ್ಸಿನ್‌ಗೆ ದರ ನಿಗದಿಯನ್ನು ಮಾಡಲಿದೆ. ದರ ನಿಗದಿ ಪಡಿಸಿದ ನಂತರದಲ್ಲಿ ಮಕ್ಕಳಿಗೆ ವ್ಯಾಕ್ಸಿನ್‌ ನೀಡುವ ಕುರಿತು ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಪಡೆದ ಭಾರತೀಯರಿಗೆ ಗುಡ್ ನ್ಯೂಸ್ ಕೊಟ್ಟ ಇಟಲಿ

ಈಗಾಗಲೇ ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಯ ಅನ್ವಯ ಶಾಲೆಗಳನ್ನು ಆರಂಭಿಸಲಾಗಿದೆ. ಶಾಲೆಗಳಲ್ಲಿ ತುಂಬಾ ಎಚ್ಚರಿಕೆ ಅಗತ್ಯ. ಶಾಲೆಗಳಲ್ಲಿನ ಶೇ.10ರಷ್ಟು ಮಕ್ಕಳಿಗೆ ಕಡ್ಡಾಯವಾಗಿ ಕೊರೊನಾ ಟೆಸ್ಟ್‌ ಮಾಡಿಸಬೇಕು. ಮಕ್ಕಳಲ್ಲಿ ಶೇ.008 ರಷ್ಟು ಸೋಂಕು ಇದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಮಕ್ಕಳ ಮೇಲೆ ಲಸಿಕೆ ಪ್ರಯೋಗ : ಸೀರಮ್‌ ಸಂಸ್ಥೆಗೆ ಸರಕಾರದ ಅನುಮತಿ

Comments are closed.