ಬೆಂಗಳೂರು : ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್ಡೌನ್ ಮುಂದುವರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದ ಗಡಿ ಜಿಲ್ಲೆಗಳಾದ ಮೈಸೂರು,ದಕ್ಷಿಣ ಕನ್ನಡ, ಚಾಮರಾಜನಗರ, ವಿಜಯಪುರ, ಕಲಬುರಗಿ, ಬೆಳಗಾವಿ, ಕೊಡಗು, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್ ಮುಂದುವರಿಕೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉಳಿದಂತೆ ಎಲ್ಲಾ ಸೇವೆಗಳನ್ನು ಬಂದ್ ಮಾಡುವಂತೆ ರಾಜ್ಯ ಸರಕಾರ ಸೂಚನೆಯನ್ನು ನೀಡಿದೆ.
ಇಂದು ರಾತ್ರಿ 9 ಗಂಟೆಯಿಂದಲೇ ವೀಕೆಂಡ್ ಕರ್ಪ್ಯೂ ಆರಂಭವಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯ ವರೆಗೂ ಕೂಡ ಮುಂದುವರಿಯಲಿದೆ. ಅಗಸ್ಟ್ 30ರ ವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಅಲ್ಲದೇ ಗಡಿಭಾಗದ ಜಿಲ್ಲೆಗಳಲ್ಲಿ ರೂಲ್ಸ್‌ನ್ನು ಇನ್ನಷ್ಟು ಕಠಿಣಗೊಳಿಸಿದೆ.
ಇದನ್ನೂ ಓದಿ : ವೀಕೆಂಡ್ ಲಾಕ್‌ಡೌನ್‌ಗೆ ವಿರೋಧ : ವರ್ತಕರಿಗೆ ಬೆಂಬಲ ಸೂಚಿಸಿದ ಸಚಿವ ಸೋಮಶೇಖರ್
ಇದನ್ನೂ ಓದಿ : ಕರಾವಳಿಯಲ್ಲಿ ತಗ್ಗದ ಕೊರೊನಾ ಅಬ್ಬರ : ಸದ್ಯಕ್ಕಿಲ್ಲ ಶಾಲಾರಂಭ