ಜನವರಿ 15 ರಿಂದ ಕಾಲೇಜು ಪುನರಾರಂಭ : ರೋಗ ಲಕ್ಷಣ ಇಲ್ಲದಿದ್ರೆ ಬೇಡ ಕೊರೊನಾ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ಪದವಿ, ಸ್ನಾತಕೋತ್ತರ, ಪಾಲಿಟೆಕ್ಸಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳು ಜನವರಿ 15ರಿಂದಲೇ ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳುತ್ತಿದೆ. ಕೊರೊನಾ ರೋಗ ಲಕ್ಷಣಗಳು ಇಲ್ಲದ ವಿದ್ಯಾರ್ಥಿಗಳಿಗೆ ಕಡ್ಡಾಯ ಕೊರೊನಾ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.

ಕಾಲೇಜುಗಳ ಪುನರಾರಂಭ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೊರೊನಾ ಮಾರ್ಗಸೂಚಿಯನ್ನು ಹೊರಡಿಸಿದೆ. ಕೊರೊನಾ ನಿಯಂತ್ರಣಕ್ಕೆ ಕಾಲೇಜುಗಳು ಕೈಗೊಳ್ಳಬೇಕಾದ ಮಾರ್ಗೋಪಾಯಗಳನ್ನು ವಿವರಿಸಲಾಗಿದೆ. ಅಲ್ಲದೇ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕೊರೊನಾ ತಪಾಸಣೆಗೆ ಒಳಪಡಬೇಕೆಂಬ ನಿಯಮವಿದೆ. ಆದರೆ ವಿದ್ಯಾರ್ಥಿಗಳಲ್ಲಿ ಕೊರೊನಾ ರೋಗದ ಲಕ್ಷಣಗಳು ಕಂಡುಬಂದಿಲ್ಲವಾದ್ರೆ ಅಂತಹ ವಿದ್ಯಾರ್ಥಿಗಳು ಕೊರೊನಾ ತಪಾಸಣೆಯನ್ನು ಮಾಡುವುದು ಬೇಡ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ ತಿಳಿಸಿದ್ದಾರೆ.

ನ.17ರಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜು ಆರಂಭಿಸಿದಾಗ ನೀಡಲಾಗಿದ್ದ ಮಾರ್ಗಸೂಚಿಗಳನ್ನೇ ಇತರೆ ಎಲ್ಲಾ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ. ಶಿಕ್ಷಣ ಸಂಸ್ಥೆಗಳು, ಬೋಧಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ನಿಯಮ ಗಳನ್ನು ಪಾಲನೆಗಳನ್ನು ಮಾಡಬೇಕು ಎಂದು ಸೂಚಿಸಲಾಗಿದೆ.

ಮಾರ್ಗಸೂಚಿಯಲ್ಲಿ ತರಗತಿಗೆ ಬರಲು ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯವಾಗಿದೆ. ಆದರೆ, ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ. ತರಗತಿಗೆ ಬರಲಿಚ್ಛಿಸದವರು ಆನ್’ಲೈನ್ ತರಗತಿ ಮುಂದುವರೆಸಬಹುದಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನ ಕೊಠಡಿಗಳ ಸಂಖಅಯೆಗೆ ಅನುಗುಣವಾಗಿ ಆಸನದ ವ್ಯವಸ್ಥೆ, ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ ಎಂದು ತಿಳಿಸಲಾಗಿದೆ.

Comments are closed.