ಕೇರಳದಿಂದ ಬಂದಿದ್ದ 15 ವಿದ್ಯಾರ್ಥಿಗಳಿಗೆ ಕೊರೊನಾ : ಕೋಲಾರದ ನರ್ಸಿಂಗ್‌ ಕಾಲೇಜಿನಲ್ಲಿ ಕೊರೊನಾ ರಣಕೇಕೆ

ಕೋಲಾರ : ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಲೇ ಕಾಲೇಜುಗಳು ಆರಂಭಗೊಂಡಿವೆ. ಆದರೆ ಕೇರಳದಲ್ಲಿ ಸೋಂಕು ಹೆಚ್ಚುತ್ತಿರುವುದು ಕರ್ನಾಟಕಕ್ಕೆ ಮಾರಕ ವಾಗುತ್ತಿದೆ. ಇದೀಗ ಕೋಲಾರದ ನರ್ಸಿಂಗ್‌ ಕಾಲೇಜಿಗೆ ಕೇರಳದಿಂದ ಬಂದಿದ್ದ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆತಂಕ ಶುರುವಾಗಿದೆ.

ಕೋಲಾರದ ಕೆಜಿಎಫ್‌ನಲ್ಲಿರುವ ನೂರ್‌ ನೀಸ್‌ ನರ್ಸಿಂಗ್‌ ಕಾಲೇಜಿಗೆ ಕಳೆದ ಎರಡು ದಿನಗಳ ಹಿಂದೆಯಷ್ಟೇ ಕೇರಳದಿಂದ ಆಗಮಿಸಿದ್ದ ಕೆಲವು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲೀಗ ಕಾಲೇಜಿನಲ್ಲಿರುವ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಕಾಲೇಜಿನಲ್ಲಿ ಸದ್ಯ 200 ವಿದ್ಯಾರ್ಥಿಗಳಿದ್ದು ಎಲ್ಲಾ ವಿದ್ಯಾರ್ಥಿಗಳಿಗೆ ಕೊರೊನಾ ಆತಂಕ ಶುರುವಾಗಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಈಗಾಗಲೇ ಕೋವಿಡ್‌ ಕೇರ್‌ ಕೇಂದ್ರಕ್ಕೆ ಶಿಫ್ಟ್‌ ಮಾಡಲಾಗಿದ್ದು, ವಿದ್ಯಾರ್ಥಿಗಳ ಜೊತೆಗೆ ಸಂಪರ್ಕದಲ್ಲಿರುವವರಿಗೆ ಕ್ವಾರಂಟೈನ್‌ನಲ್ಲಿರಲು ಸೂಚಿಸಿದೆ.

ಇದನ್ನೂ ಓದಿ : PUC : ದ್ವಿತೀಯ ಪಿಯು ಆರಂಭಕ್ಕೆ ಮಾರ್ಗಸೂಚಿ ಪ್ರಕಟ : ದ.ಕ ಡಿಸಿ ಕೆ.ವಿ.ರಾಜೇಂದ್ರ

ಇದನ್ನೂ ಓದಿ : Corona Updates : ಭಾರತದಲ್ಲಿ 5ನೇ ದಿನವೂ ಕೋವಿಡ್ ಪ್ರಕರಣಗಳ ಏರಿಕೆ

Comments are closed.