ಲಾಕ್ ಡೌನ್ ತೆರವು ಬೆನ್ನಲ್ಲೇ ನಾಳೆಯಿಂದ ಬಸ್ ಸಂಚಾರ ಆರಂಭ

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಹೇರಿಕೆಯಾಗಿದ್ದ ಲಾಕ್ ಡೌನ್ ಆದೇಶವನ್ನು ರಾಜ್ಯ ಸರಕಾರ ತೆರೆವುಗೊಳಿಸಿದೆ. ಇದರ ಬೆನ್ನಲ್ಲೇ ಬೆಳಗ್ಗೆ 6 ಗಂಟೆಯಿಮದಲೇ ಬೆಂಗಳೂರಿನಿಂದ ರಾಜ್ಯದ ಇತರ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಲಿದೆ ಎಂದು ಸರಕಾರ ಸ್ಪಷ್ಟನೆ ನೀಡಿದೆ.

ಜುಲೈ 14ರಿಂದ ರಾಜಧಾನಿ ಬೆಂಗಳೂರಲ್ಲಿ ಲಾಕ್ ಡೌನ್ ಹೇರಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಲಾಕ್ ಡೌನ್ ಆದೇಶವನ್ನು ತೆರೆವುಗೊಳಿಸುತ್ತಿದ್ದಂತೆಯೇ ಬಸ್ ಸಂಚಾರವನ್ನು ಪುನರಾರಂಭಿಸಲು ಮುಂದಾಗಿದೆ.

ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂದು ರಾಜ್ಯ ಸಾರಿಗೆ ಸಂಸ್ಥೆ ಸ್ಪಷ್ಟಪಡಿಸಿದೆ.

Leave A Reply

Your email address will not be published.