ವೈದ್ಯರು, ಆರೋಗ್ಯ ಸಿಬ್ಬಂದಿಗೆ ಕೊರೊನಾ ಸೋಂಕು : ಲೇಡಿಗೋಷನ್ ಆಸ್ಪತ್ರೆ ಸೀಲ್ ಡೌನ್

0

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದೆ. ಅದ್ರಲ್ಲೂ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ಈಗಾಗಲೇ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಕೊರೊನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಫ್ಯೂಮಿಗೇಶನ್ ಮತ್ತು ಸ್ಯಾನಿಟೈಸೇಶನ್ ಮಾಡಬೇಕಾಗಿರುವುದರಿಂದ ಸಾರ್ವಜನಿಕರು ಹಾಗೂ ರೋಗಿಗಳ ಹಿತದೃಷ್ಟಿಯಿಂದ ಜೂನ್ 30 ರಿಂದ ಜುಲೈ 6ರ ವರೆಗೆ ಆಸ್ಪತ್ರೆಯ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಜುಲೈ 7 ರಿಂದ ಆಸ್ಪತ್ರೆ ಎಂದಿನಂತೆಯೇ ಕಾರ್ಯನಿರ್ವಹಿಸಲಿದೆ.

ರೋಗಿಗಳ ಚಿಕಿತ್ಸೆಗಾಗಿ ಎಬಿ-ಎಆರ್ ಕೆ ಯೋಜನೆಯಡಿಯಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲು ಶಿಫಾರಸ್ಸು ಪತ್ರವನ್ನು ನೀಡಲಾಗುತ್ತದೆ. ಈ ಕುರಿತು ಯಾವುದೇ ಮಾಹಿತಿ ಬೇಕಾಗಿದ್ದಲ್ಲಿ, AB-ARK ಯೋಜನೆಯ ನೋಡಲ್ ಅಧಿಕಾರಿ ಡಾ.ಶಕುಂತಳಾ ಎಂ. ಅವರನ್ನು ಸಂಪರ್ಕ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2424001 ನ್ನು ಸಂಪರ್ಕಿಸುವಂತೆ ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕರು ತಿಳಿಸಿದ್ದಾರೆ.

Leave A Reply

Your email address will not be published.