ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಆದೇಶಿಸಿರೋ ಲಾಕ್ ಡೌನ್ ಆದೇಶವನ್ನು ರಾಜ್ಯದಲ್ಲಿಯೂ ಮೇ 3ರ ವರೆಗೆ ಮುಂದುವರಿಸಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಕೇರಳ, ಮಧ್ಯಪ್ರದೇಶ ಮಾದರಿಯಲ್ಲಿ ಕ್ರಮಕೈಗೊಳ್ಳಲು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.

ಎಪ್ರಿಲ್ 20ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಆದೇಶ ಸಡಿಲ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿತ್ತು. ಆದರೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಲಾಕ್ ಡೌನ್ ಆದೇಶದಲ್ಲಿ ಯಾವುದೇ ಸಡಿಲತೆ ನೀಡದಿರಲು ತೀರ್ಮಾನಿಸಲಾಗಿದೆ.

ಮೇ 3ರ ವರೆಗೆ ಲಾಕ್ ಡೌನ್ ಆದೇಶ ಮುಂದುವರಿಸಲಾಗುತ್ತಿದ್ದು, ಯಾವುದೇ ಕಾರಣಕ್ಕೂ ವಿನಾಯಿತಿಯನ್ನು ನೀಡದಿರಲು ಸರಕಾರ ಖಡಕ್ ನಿರ್ಧಾರ ಕೈಗೊಂಡಿದೆ.

ಕೊರೊನಾ ಲಾಕ್ ಡೌನ್ ನಲ್ಲಿ ಸಡಿಲಿಕೆ ಬೇಕಾ ಬೇಡವೇ ಅನ್ನೋ ಕುರಿತು ಇನ್ನೂ ಎರಡು ಮೂರು ದಿನಗಳಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.