Mandatory covid test cancelled: ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಕೋವಿಡ್‌ ಪರೀಕ್ಷೆ ರದ್ದು

ನವದೆಹಲಿ: (Mandatory covid test cancelled) ವಿದೇಶದಲ್ಲಿ ಕೊರೊನಾ ಸೋಂಕು ಉಲ್ಬಣವಾದ ಹಿನ್ನಲೆಯಲ್ಲಿ ಚೀನಾ, ಸಿಂಗಾಪುರ, ಕೊರಿಯಾ, ಥಾಯ್ಲೆಂಡ್ ಮತ್ತು ಜಪಾನ್‌ನಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯ ಕೋವಿಡ್‌ ಪರೀಕ್ಷೆಯನ್ನು ವಿಧಿಸಲಾಗಿತ್ತು. ಇದೀಗ ವಿಧಿಸಲಾಗಿದ್ದ ಕಡ್ಡಾಯ ಕೋವಿಡ್ ಪರೀಕ್ಷಾ ನಿಯಮವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಚೀನಾ ಸೇರಿದಂತೆ ಭಾರತದ ನೆರೆಯ ದೇಶಗಳಲ್ಲಿ ಕೋವಿಡ್‌ ಉಲ್ಬಣವಾದ ಹಿನ್ನಲೆಯಲ್ಲಿ ಕೇಂದ್ರ ಸರಕಾರವು ಮುನ್ನೆಚ್ಚರಿಕಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿತ್ತು. ವಿದೇಶದಿಂದ ಭಾರತಕ್ಕೆ ಬರುವ ಎಲ್ಲಾ ಪ್ರಯಾಣಿಕರಿಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್‌ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿತ್ತು. ಆದರೆ ಇದೀಗ ಆರೋಗ್ಯ ಸಚಿವಾಲಯವು ಕಡ್ಡಾಯ ಕೋವಿಡ್‌ ಪರೀಕ್ಷೆಯನ್ನು ಕೈಬಿಟ್ಟಿದೆ.

ಅಧಿಸೂಚನೆಯ ಪ್ರಕಾರ, “ಸಚಿವಾಲಯವು ತನ್ನ ‘ಅಂತರರಾಷ್ಟ್ರೀಯ ಆಗಮನಕ್ಕಾಗಿ ಮಾರ್ಗಸೂಚಿಗಳನ್ನು’ ನವೀಕರಿಸುತ್ತಿದೆ ಮತ್ತು ನಿರ್ಗಮನ ಪೂರ್ವ COVID-19 ಪರೀಕ್ಷೆಯ ಅಸ್ತಿತ್ವದಲ್ಲಿರುವ ಅವಶ್ಯಕತೆಗಳನ್ನು ಕೈಬಿಡುತ್ತಿದೆ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ‘ಏರ್ ಸುವಿಧಾ’ ಪೋರ್ಟಲ್‌ನಲ್ಲಿ ಸ್ವಯಂ-ಆರೋಗ್ಯ ಘೋಷಣೆಯನ್ನು ಅಪ್‌ಲೋಡ್ ಮಾಡುತ್ತಿದೆ. ಚೀನಾ, ಸಿಂಗಾಪುರ್, ಹಾಂಗ್ ಕಾಂಗ್, ರಿಪಬ್ಲಿಕ್ ಆಫ್ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್ ಈ ಐದು ದೇಶಗಳಿಂದ ಭಾರತಕ್ಕೆ ಆಗಮಿಸುವವರು ಫೆಬ್ರವರಿ 13 ರಿಂದ ಕಡ್ಡಾಯ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ. ” ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಈ ದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷಾ ನಿಯಮದಿಂದ ವಿನಾಯಿತಿ ನೀಡಲಾಗಿದೆ –
ಚೀನಾ
ಸಿಂಗಾಪುರ
ಕೊರಿಯಾ
ಥೈಲ್ಯಾಂಡ್
ಜಪಾನ್

ಇದನ್ನೂ ಓದಿ : Intranasal covid vaccine: ಗಣರಾಜ್ಯೋತ್ಸವದಂದು ವಿಶ್ವದ ಮೊದಲ ಕೋವಿಡ್‌ ಮೂಗಿನ ಲಸಿಕೆ ಪ್ರಾರಂಭ

ಇದನ್ನೂ ಓದಿ : India Covid cases: ಭಾರತದಲ್ಲೂ ಹೆಚ್ಚುತ್ತಿದೆ ಕೋವಿಡ್ ಸೋಂಕು: 24 ಗಂಟೆಗಳಲ್ಲಿ 140 ಹೊಸ ಕೋವಿಡ್ ಪ್ರಕರಣ ದಾಖಲು

ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಚೀನಾ, ಸಿಂಗಾಪುರ, ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್‌ನಿಂದ ಆಗಮಿಸುವ ಪ್ರಯಾಣಿಕರು ‘ಏರ್ ಸುವಿಧಾ’ ಪೋರ್ಟಲ್‌ನಲ್ಲಿ ಆರ್‌ಟಿ-ಪಿಸಿಆರ್ ವರದಿಯನ್ನು ಅಪ್‌ಲೋಡ್ ಮಾಡಲು ಸರ್ಕಾರ ಈ ಹಿಂದೆ ಕಡ್ಡಾಯಗೊಳಿಸಿತ್ತು. ಆದರೆ ಈಗ ಈ ನಿಯಮವನ್ನು ಕೈಬಿಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಅಧಿಸೂಚನೆಯನ್ನು ಹೊರಡಿಸಿದೆ.

Mandatory covid test cancelled: Mandatory covid test canceled for international passengers

Comments are closed.