ಮಂಗಳೂರು : ಕಳೆದ ಕೆಲವು ತಿಂಗಳಿನಿಂದಲೂ ಇಳಿಕೆಯನ್ನು ಕಂಡಿದ್ದ ಕೊರೊನಾ ವೈರಸ್ ಸೋಂಕು ಇದೀಗ ಮತ್ತೆ ಕರಾವಳಿ ಭಾಗದಲ್ಲಿ ಆತಂಕವನ್ನು ಹುಟ್ಟಿಸುತ್ತಿದೆ. ಇದೀಗ ಮಂಗಳೂರು ನಗರದ ಕಾವೂರಿನಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು (Nursing Students corona) ದೃಢಪಟ್ಟಿದ್ದು, ಕಾಲೇಜನ್ನು ಕಂಟೈನ್ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಕೂಡ ಕೇರಳ ಮೂಲದವರು (Kerala Nursing students) ಎಂದು ತಿಳಿದು ಬಂದಿದೆ.
ಕಾಲೇಜಿನಲ್ಲಿ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿದ್ದಾರೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳ ಜೊತೆ ಸಂಪರ್ಕ ದಲ್ಲಿದ್ದ 173 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇದೀಗ ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.
ಕೊರೊನಾ ಮೊದಲ ಹಾಗೂ ಎರಡನೇ ಅಲೆಯ ವೇಳೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಕೊರೊನಾ ಸೋಂಕು ದೃಢಪಟ್ಟಿತ್ತು. ಅಲ್ಲದೇ ಸಾವುಗಳ ಸಂಖ್ಯೆಯಲ್ಲಿಯೂ ಏರಿಕೆಯಾಗಿತ್ತು. ಆರಂಭದಲ್ಲಿ ಕೇರಳದಿಂದಲೇ ಕೊರೊನಾ (Kerala Nursing students) ಸೋಂಕು ಜಿಲ್ಲೆಗೆ ವ್ಯಾಪಿಸಿತ್ತು ಅನ್ನೋ ಆರೋಪವೂ ಕೇಳಿಬಂದಿತ್ತು. ಇದೀಗ ರಾಜ್ಯದ ಹಲವು ಶೈಕ್ಷಣಿಕ ಸಂಸ್ಥೆಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಬಹುತೇಕ ವಿದ್ಯಾರ್ಥಿಗಳು ಕೇರಳದವರೇ (Nursing Students corona) ಆಗಿದ್ದಾರೆ. ಹೀಗಾಗಿ ಕರಾವಳಿ ಭಾಗದಲ್ಲೀಗ ಮತ್ತೆ ಕೊರೊನಾ ಆತಂಕ ಶುರುವಾಗಿದೆ.
ಕೇರಳ ಹಾಗೂ ದಕ್ಷಿಣ ಕನ್ನಡ ಗಡಿಯಲ್ಲಿ ಈಗಾಗಲೇ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯಕ್ಕೆ ಪ್ರವೇಶಿಸುವವರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಇನ್ನು ಶೈಕ್ಷಣಿಕ ಸಂಸ್ಥೆಯಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳನ್ನೂ ಕೂಡ ಪರೀಕ್ಷೆಗೆ ಒಳಪಡಿಸುವ ಕುರಿತು ಚಿಂತನೆ ನಡೆಯುತ್ತಿದೆ.
ಕೇರಳ ವಿದ್ಯಾರ್ಥಿಗಳೇ (Kerala Nursing students) ಕೊರೊನಾ ಕಂಟಕ
ರಾಜ್ಯದ ಧಾರವಾಡ, ಬೆಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿನ ನರ್ಸಿಂಗ್ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದ ಕಾಲೇಜುಗಳಲ್ಲಿ ಈಗಾಗಲೇ ಐನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕೊರೊನಾ ಸೋಂಕಿನಿಂದ ತತ್ತರಿಸಿದ್ದಾರೆ. ಇನ್ನೊಂದಡೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿರುವ ಬಹುತೇಕ ವಿದ್ಯಾರ್ಥಿಗಳು ಕೂಡ ಕೇರಳದವರೇ ಆಗಿದ್ದಾರೆ. ಹೀಗಾಗಿ ರಾಜ್ಯಕ್ಕೆ ಕೇರಳ ವಿದ್ಯಾರ್ಥಿಗಳೇ ಕಂಟಕವಾಗುವ ಸಾಧ್ಯತೆಯಿದೆ.
ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಯ 130 ವಿದ್ಯಾರ್ಥಿಗಳಿಗೆ ಕೊರೊನಾ
ರಾಜ್ಯದಲ್ಲಿ ಓಮಿಕ್ರಾನ್ ಭೀತಿಯ ನಡುವಲ್ಲೇ ಇದೀಗ ಶಾಲೆ, ಕಾಲೇಜುಗಳಲ್ಲಿಯೂ ಕೊರೊನಾ ಸ್ಪೋಟ ಉಂಟಾಗಿದೆ. ಅದ್ರಲ್ಲೂ ಶೈಕ್ಷಣಿಕ ಸಂಸ್ಥೆಗಳೇ ಕೊರೊನಾ ಹಾಟ್ ಸ್ಪಾಟ್ ಆಗುವ ಸೂಚನೆಯ ಲಭಿಸುತ್ತಿದೆ. ಸಾರ್ವಜನಿಕ ಬೋಧನಾ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ 1 ರಿಂದ 10 ನೇ ತರಗತಿಯ 130 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕರ್ನಾಟದ ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳಿಂದ ದತ್ತಾಂಶವನ್ನು ಕ್ರೋಢೀಕರಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಜವಾಹರ್ ನವೋದಯ ವಸತಿ ಶಾಲೆಯಲ್ಲಿಯೇ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
ಇದನ್ನೂ ಓದಿ : Nanjappa Hospital : 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ : ನಂಜಪ್ಪ ಆಸ್ಪತ್ರೆ, ಕಾಲೇಜು ಸೀಲ್ ಡೌನ್
ಇದನ್ನೂ ಓದಿ : SDM ಕಾಲೇಜಿನಲ್ಲಿ ಕೊರೊನಾ ಸ್ಪೋಟ : 306 ವಿದ್ಯಾರ್ಥಿಗಳಿಗೆ ಸೋಂಕು ದೃಢ
ಇದನ್ನೂ ಓದಿ : School Close Karnataka : ಶಾಲೆಗಳ ಮೇಲೆ ಮತ್ತೆ ಕೊರೊನಾ ಕರಿನೆರಳು: ಮತ್ತೆ ಬಾಗಿಲುಮುಚ್ಚಲಿದೆ ಶಿಕ್ಷಣ ಸಂಸ್ಥೆಗಳು ?!
(Corona Confirmed in 9 Students from Kerala in Nursing College Kavoor Mangalore)