ಕರಾವಳಿಯಲ್ಲಿ ಹೆಚ್ಚಿದ ಕೊರೊನಾ ಸೋಂಕು : ದಕ್ಷಿಣ ಕನ್ನಡದಲ್ಲಿ ಮತ್ತೆ ಇಬ್ಬರಿಗೆ ಕೊರೊನಾ

0

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 26 ವರ್ಷದ ಯುವಕ ಹಾಗೂ 50 ವರ್ಷದ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಆದರೆ ಇಬ್ಬರೂ ಕೂಡ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿಗಳಾಗಿದ್ದಾರೆ. ಇಬ್ಬರಿಗೂ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. ಕರಾವಳಿಯಲ್ಲೀಗ ಕೊರೊನಾ ಸೋಂಕು ವ್ಯಾಪಿಸುತ್ತಿರುವುದು ಆತಂಕವನ್ನು ಮೂಡಿಸಿದೆ.

Leave A Reply

Your email address will not be published.