ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ್ನು ಒಂದು ವರ್ಷ ಮಾಸ್ಕ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ. ‘ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ 2020’ಹೆಸರಿನಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ಸಾರ್ವಜನಿಕವಾಗಿ ಓಡಾಡಬೇಕೆಂದ್ರೆ ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಿರಲೇ ಬೇಕು. ಮಾಸ್ಕ್ ಇಲ್ಲವಾದ್ರೆ ಕರವಸ್ತ್ರ ಅಥವಾ ಬಟ್ಟೆಯಿಂದಾದ್ರೂ ಮುಖವನ್ನು ಮುಚ್ಚಿರಲೇ ಬೇಕು. ಈ ಆದೇಶ ಜಾರಿಯಾದ ಒಂದು ವರ್ಷದ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 200 ರೂಪಾಯಿ ಹಾಗೂ ಮಹಾನಗರವಲ್ಲದ ಪ್ರದೇಶಗಳಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತದೆ. ಮಹಾನಗರ ಪಾಲಿಕೆಯ ಆರೋಗ್ಯ ಇನ್ ಸ್ಪೆಕ್ಟರ್, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ, ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹಾಗೂ ಸರಕಾರ ಯಾವುದೇ ಅಧಿಕಾರಿಗೂ ದಂಡವಿಧಿಸುವ ಅಧಿಕಾರವನ್ನು ನೀಡಲಾಗಿದೆ.