COVID-19 : ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚಿದೆ ಎಂದು ಈಗಾಗಲೇ ಸಾಕಷ್ಟು ಅಧ್ಯಯನಗಳು ಮಾಹಿತಿ ನೀಡಿವೆ. ಅಲ್ಲದೇ ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯು ದಿನದಿಂದ ದಿನಕ್ಕೆ ಮಿತಿಮೀರುತ್ತಲೇ ಇದೆ. ಈ ಎಲ್ಲದರ ನಡುವೆ ಕೇಂದ್ರ ಸರ್ಕಾರವು ಕೊರೊನಾ ಸೋಂಕಿನ ತಡೆಗೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳತ್ತಲೇ ಬರ್ತಿದೆ. ಇದೀಗ ಮಕ್ಕಳಿಗೆ ಕೊರೊನಾ ಮಾರ್ಗಸೂಚಿ ವಿಚಾರದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯು ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿದೆ. ಇದರನ್ವಯ ಮಕ್ಕಳಿಗೆ ಕೋವಿಡ್ ಸೋಂಕು ಎಷ್ಟೇ ತೀವ್ರತರವಾಗಿದ್ದರೂ ಸಹ ಆ್ಯಂಟಿ ವೈರಸ್ ಹಾಗೂ ಮೊನೋಕ್ಲೊನಲ್ ಆ್ಯಂಟಿಬಾಡಿಗಳನ್ನು ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.
ಮಕ್ಕಳು ಹಾಗೂ ಹದಿಹರೆಯದವರಿಗೆ ಕೋವಿಡ್ 19 ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರವು ಐದು ವರ್ಷಕ್ಕಿಂತ ಕೆಳಗಿನ ಮಕ್ಕಳು ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಇನ್ನು 6 ರಿಂದ 11 ವರ್ಷದ ಒಳಗಿನ ಮಕ್ಕಳು ಪೋಷಕರ ಮಾರ್ಗದರ್ಶನದಲ್ಲಿ ಸೂಕ್ತವಾಗಿ ಮಾಸ್ಕ್ ಧರಿಸಲು ಸಾಧ್ಯವಾದರೆ ಮಾತ್ರ ಮಾಸ್ಕ್ ಧರಿಸಬಹುದು ಎಂದು ನಿರ್ದೇಶನ ನೀಡಿದೆ.
ಇನ್ನು 12 ವರ್ಷ ಮೇಲ್ಪಟ್ಟವರು ಮಾತ್ರ ಎಲ್ಲರಂತೆ ಮಾಸ್ಕ್ ಧರಿಸುವುದು ಅನಿವಾರ್ಯ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಪ್ರಸ್ತುತ ದೇಶದಲ್ಲಿ ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡ ತಜ್ಞರ ತಂಡವು ಈ ಮಾರ್ಗಸೂಚಿಯನ್ನು ಪರಿಷ್ಕೃತಗೊಳಿಸಿದೆ.
ಇನ್ನು ವಿದೇಶಗಳಲ್ಲಿ ಸಿಕ್ಕಂತಹ ದತ್ತಾಂಶಗಳನ್ನು ನೋಡಿದರೆ ಓಮಿಕ್ರಾನ್ ರೂಪಾಂತರಿಯು ಹೆಚ್ಚು ಗಂಭೀರ ಲಕ್ಷಣಗಳನ್ನು ಹೊಂದಿಲ್ಲ. ಹಾಗೆಂದ ಮಾತ್ರಕ್ಕೆ ಕೊರೊನಾ ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಇದನ್ನು ಅಸಿಂಪ್ಟೋಮ್ಯಾಟಿಕ್, ಸೌಮ್ಯ , ಮಧ್ಯಮ ಹಾಗೂ ಗಂಭೀರ ಎಂದು ವಿಂಗಡಿಸಲಾಗಿದೆ.
ಮಾರ್ಗಸೂಚಿಯ ಪ್ರಕಾರ ಕೋವಿಡ್ 19 ಒಂದು ವೈರಲ್ ಸೋಂಕಾಗಿದ್ದು ಈ ಸೋಂಕನ್ನು ನಿವಾರಿಸುವಲ್ಲಿ ಆಂಟಿಮೈಕ್ರೋಬಯಲ್ಸ್ ಯಾವುದೇ ರೀತಿಯ ಪಾತ್ರ ವಹಿಸುವುದಿಲ್ಲ ಎಂದು ಹೇಳಲಾಗಿದೆ.
Masks Not Recommended For Children Below 5 Years, Says Revised Guidelines
ಇದನ್ನು ಓದಿ : T20 World Cup 2022 ವೇಳಾಪಟ್ಟಿ ಪ್ರಕಟ : ಭಾರತಕ್ಕೆ ಪಾಕಿಸ್ತಾನ ಮೊದಲ ಎದುರಾಳಿ
ಇದನ್ನೂ ಓದಿ : Siddaramaiah outrage : ಕೊರೋನಾ ಚಿಕಿತ್ಸೆ ಹೊಣೆ ಖಾಸಗಿಯವರಿಗೆ, ಸರ್ಕಾರ ನಿದ್ರೆಗೆ : ಚಾಟಿ ಬೀಸಿದ ಸಿದ್ಧರಾಮಯ್ಯ