School and college close : ಶಾಲಾ/ಕಾಲೇಜು ಬಂದ್​ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಚಿವ ಬಿ.ಸಿ ನಾಗೇಶ್​

ಬೆಂಗಳೂರು : School and college close :ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ ಈಗಾಗಲೇ ಶಾಲಾ – ಕಾಲೇಜುಗಳನ್ನು ಬಂದ್​ ಮಾಡಲಾಗಿದೆ. ಬೆಂಗಳೂರಿನಲ್ಲಿ ಓಮಿಕ್ರಾನ್​ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 2 ವಾರಗಳ ಕಾಲ ಎಲ್​ಕೆಜಿ,ಯುಕೆಜಿ ಹಾಗೂ 1 ರಿಂದ 9ನೇ ತರಗತಿ ಸೇರಿದಂತೆ ಎಲ್ಲಾ ಪದವಿ ತರಗತಿಗಳಿಗೆ ಆನ್​ ಲೈನ್​ ಪಾಠ ಮಾಡುವಂತೆ ಹೇಳಿದೆ. 10ನೇ ತರಗತಿ, ಪ್ರಥಮ ಹಾಗೂ ದ್ವಿತೀಯ ಪಿಯುಸಿ, ಮೆಡಿಕಲ್​, ಪ್ಯಾರಾ ಮೆಡಿಕಲ್​ ವಿದ್ಯಾರ್ಥಿಗಳಿಗೆ ಎಂದಿನಂತೆ ಆಫ್​ಲೈನ್​ ತರಗತಿಗಳು ನಡೆಯಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಆದರೆ ಕೇವಲ ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾದ ಕರಿನೆರಳು ವ್ಯಾಪಿಸುತ್ತಲೇ ಇದೆ. ಶಾಲಾ ಕಾಲೇಜುಗಳು ಆರಂಭವಾಗಿ ಕೇವಲ 4 ತಿಂಗಳಲ್ಲೇ ಈ ರೀತಿ ಮತ್ತೆ ಶಾಲೆಗಳು ಬಂದ್​ ಆಗಲಿವೆಯಾ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಗೊಂದಲಗಳಿಗೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಎಲ್ಲೆಲ್ಲಿ ಕೊರೊನಾ ಪಾಸಿಟಿವಿಟಿ ದರ 5 ಪ್ರತಿಶತಕ್ಕಿಂತ ಹೆಚ್ಚಾಗುತ್ತದೆಯೋ ಎಲ್ಲೆಲ್ಲ ಶಾಲೆಗಳನ್ನು ಬಂದ್ ಮಾಡಲು ಉದ್ದೇಶಿಸಲಾಗಿದೆ. ಬೆಂಗಳೂರಿನಲ್ಲಿ ಪ್ರಸ್ತುತ ಕೊರೊನಾ ಪಾಸಿಟಿವಿಟಿ ದರ ಹೆಚ್ಚಾಗಿದೆ. ಇದೇ ಕಾರಣಕ್ಕೆ ಶಾಲಾ – ಕಾಲೇಜುಗಳನ್ನು ಬಂದ್​ ಮಾಡಿದ್ದೇವೆ. ರಾಜ್ಯದ ಎಲ್ಲಾ ಶಾಲೆ ಕಾಲೇಜುಗಳ ಬಂದ್​ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ಹೇಳಿಕೆ ನೀಡಿದರು. ಪಾಸಿಟಿವಿಟಿ ದರ ಹೆಚ್ಚಾದರೆ ಅಲ್ಲಿ ಶಾಲೆಗಳನ್ನು ಬಂದ್​ ಮಾಡುವ ಬಗ್ಗೆ ಯೋಚನೆ ಮಾಡಿದ್ದೇವೆ. ತಾಲೂಕು ಮಟ್ಟದಲ್ಲಿ ಕೊರೊನಾ ಪಾಸಿಟಿವಿಟಿ ದರ ಹೆಚ್ಚಾದರೆ ಅಲ್ಲಿನ ಶಾಲೆಗಳನ್ನು ಬಂದ್​ ಮಾಡುವ ನಿರ್ಧಾರ ಡಿಸಿಗಳಿಗೆ ವಹಿಸಲಾಗುತ್ತದೆ ಎಂದು ಹೇಳಿದರು.

ಇದನ್ನು ಓದಿ : CM Bommai tests corona positive : ಕೊರೊನಾ ಸೋಂಕಿಗೊಳಗಾದ ಸಿಎಂ ಬೊಮ್ಮಾಯಿಯಿಂದ ಕೋವಿಡ್​ ಮಾರ್ಗಸೂಚಿ ಉಲ್ಲಂಘನೆ..?

ಇದನ್ನೂ ಓದಿ : BJP High Command : ರಾಜ್ಯ ಬಿಜೆಪಿಗೆ ವಲಸಿಗರೇ ಕಂಟಕ : ಸಚಿವ ಎಸ್.ಟಿ. ಸೋಮಶೇಖರ್‌ ಪುತ್ರನ ಪ್ರಕರಣದ ವರದಿ ಕೇಳಿದ ಹೈಕಮಾಂಡ್

Minister B.C Nagesh statement about school and college close

Comments are closed.