ಬೆಂಗಳೂರು : Minister R Ashoka Covid positive : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ನಡುವೆಯೇ ಕಂದಾಯ ಸಚಿವ ಆರ್ ಅಶೋಕ್ರಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ. ಆರ್.ಅಶೋಕ್ರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಇನ್ನು ತಮಗೆ ಕೊರೊನಾ ಸೋಂಕು ಇರುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಸ್ವತಃ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ‘ ನನಗೆ ಕೋವಿಡ್ ಧೃಡವಾಗಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಬರೆದುಕೊಂಡಿದ್ದಾರೆ.
ಸಚಿವ ಆರ್.ಅಶೋಕ್ಗೆ ಕೊರೊನಾ ಸೋಂಕು ಧೃಡವಾಗುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಂಪುಟದ ಹಲವು ನಾಯಕರಿಗೆ ಆತಂಕ ಎದುರಾಗಿದೆ. ಏಕೆಂದರೆ ಸಚಿವ ಆರ್.ಅಶೋಕ್ ಜನವರ 5ನೇ ತಾರೀಖಿನಂದು ನಡೆದ ಕೊರೊನಾ ಜಾಗೃತಿ ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರ ಸಚಿವರು ಉಪಸ್ಥಿತರಿದ್ದರು. ಆದರೆ ಜನವರಿ 6ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೈರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ರಿಗೂ ಕೊರೊನಾ ಸೋಂಕು ಧೃಡಪಟ್ಟಿತ್ತು.
ರಾಜ್ಯದಲ್ಲಿ ಗುರುವಾರ ಒಂದೇ ದಿನ 5031 ಕೊರೊನಾ ಪ್ರಕರಣಗಳು ವರದಿಯಾಗಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದರಲ್ಲೇ 4324 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದರ ಜೊತೆಯಲ್ಲಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 107 ಓಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆ ಕಂಡಿದೆ .
minister R ashoka tested covid positive
ಇದನ್ನು ಓದಿ : Covid-19 danger list : ಕರಾವಳಿಗರು ಮೈ ಮರೆತ್ರೆ ಅಪಾಯ ಫಿಕ್ಸ್ : ದ.ಕ., ಉಡುಪಿಗೆ ಕೊರೊನಾ ಜೊತೆ ಓಮಿಕ್ರಾನ್ ಕಂಟಕ
ಇದನ್ನೂ ಓದಿ : Fresh COVID-19 Case : ದೇಶದಲ್ಲಿ ಕೊರೊನಾ ಮಹಾಸ್ಫೋಟ: ಒಂದೇ ದಿನ 1.17 ಲಕ್ಷ ಪ್ರಕರಣ ವರದಿ