Minister R Ashoka Covid positive : ಕಂದಾಯ ಸಚಿವ ಆರ್​.ಅಶೋಕ್​ಗೆ ಕೊರೊನಾ:ಆಸ್ಪತ್ರೆಗೆ ದಾಖಲು

ಬೆಂಗಳೂರು : Minister R Ashoka Covid positive : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ನಡುವೆಯೇ ಕಂದಾಯ ಸಚಿವ ಆರ್​ ಅಶೋಕ್​​​ರಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ. ಆರ್.ಅಶೋಕ್​ರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.


ಇನ್ನು ತಮಗೆ ಕೊರೊನಾ ಸೋಂಕು ಇರುವ ಬಗ್ಗೆ ಕಂದಾಯ ಸಚಿವ ಆರ್​. ಅಶೋಕ್​ ಸ್ವತಃ ಟ್ವೀಟ್​ ಮಾಡಿ ಮಾಹಿತಿ ನೀಡಿದ್ದಾರೆ. ‘ ನನಗೆ ಕೋವಿಡ್ ಧೃಡವಾಗಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಬರೆದುಕೊಂಡಿದ್ದಾರೆ.


ಸಚಿವ ಆರ್​.ಅಶೋಕ್​ಗೆ ಕೊರೊನಾ ಸೋಂಕು ಧೃಡವಾಗುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಂಪುಟದ ಹಲವು ನಾಯಕರಿಗೆ ಆತಂಕ ಎದುರಾಗಿದೆ. ಏಕೆಂದರೆ ಸಚಿವ ಆರ್​.ಅಶೋಕ್​ ಜನವರ 5ನೇ ತಾರೀಖಿನಂದು ನಡೆದ ಕೊರೊನಾ ಜಾಗೃತಿ ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರ ಸಚಿವರು ಉಪಸ್ಥಿತರಿದ್ದರು. ಆದರೆ ಜನವರಿ 6ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೈರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್​ರಿಗೂ ಕೊರೊನಾ ಸೋಂಕು ಧೃಡಪಟ್ಟಿತ್ತು.


ರಾಜ್ಯದಲ್ಲಿ ಗುರುವಾರ ಒಂದೇ ದಿನ 5031 ಕೊರೊನಾ ಪ್ರಕರಣಗಳು ವರದಿಯಾಗಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದರಲ್ಲೇ 4324 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದರ ಜೊತೆಯಲ್ಲಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 107 ಓಮಿಕ್ರಾನ್​ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ ಒಟ್ಟು ಓಮಿಕ್ರಾನ್​ ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆ ಕಂಡಿದೆ .

minister R ashoka tested covid positive

ಇದನ್ನು ಓದಿ : Covid-19 danger list : ಕರಾವಳಿಗರು ಮೈ ಮರೆತ್ರೆ ಅಪಾಯ ಫಿಕ್ಸ್‌ : ದ.ಕ., ಉಡುಪಿಗೆ ಕೊರೊನಾ ಜೊತೆ ಓಮಿಕ್ರಾನ್‌ ಕಂಟಕ

ಇದನ್ನೂ ಓದಿ : Fresh COVID-19 Case : ದೇಶದಲ್ಲಿ ಕೊರೊನಾ ಮಹಾಸ್ಫೋಟ: ಒಂದೇ ದಿನ 1.17 ಲಕ್ಷ ಪ್ರಕರಣ ವರದಿ

Comments are closed.