- Advertisement -
ಬೆಂಗಳೂರು : ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟಿರುವ ಕುರಿತು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ತನ್ನೊಂದಿಗೆ ಸಂಪರ್ಕದಲ್ಲಿರುವವರು ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿಯನ್ನು ಮಾಡಿಕೊಂಡಿದ್ದಾರೆ. ತಾನು ಆದಷ್ಟು ಶೀಘ್ರವಾಗಿ ನಿಮ್ಮ ಸೇವೆಗೆ ಮರಳುತ್ತೇನೆ ಎಂದು ತಿಳಿಸಿದ್ದಾರೆ.