ಶಾಸಕ ಶರತ್ ಬಚ್ಚೇಗೌಡಗೆ ಕೊರೊನಾ ಪಾಸಿಟಿವ್ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಆತಂಕ !

0

ಬೆಂಗಳೂರು : ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಶಾಸಕ ಶರತ್ ಬಚ್ಚೇಗೌಡ ಅವರೇ ತಮ್ಮ ಟ್ವಿಟ್ಟರ್ ನಲ್ಲಿ ವಿಡಿಯೋ ಟ್ವೀಟ್ ಮಾಡಿದ್ದಾರೆ. ಶರತ್ ಬಚ್ಚೇಗೌಡರಿಗೆ ಕೊರೊನಾ ದೃಢಪಡುತ್ತಿದ್ದಂತೆಯೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೊರೊನಾ ಆತಂಕ ಶರುವಾಗಿದೆ.

ಜುಲೈ 6 ಸೋಮವಾರದಂದು ನನಗೆ ಸ್ವಲ್ಪ ಮೈ ಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ನೀಡಿದ್ದೆ. ಆದ್ದರಿಂದ ನಾನು ಮತ್ತು ನನ್ನ ಧರ್ಮಪತ್ನಿ ಶ್ರೀಮತಿ ಪ್ರತಿಭಾ ಶರತ್ ಅವರು ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದೇವು. ಇವತ್ತು ಸಂಜೆ ಇಬ್ಬರಿಗೂ ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಆದರೆ ಯಾವುದೇ ಕೊರೊನಾ ಲಕ್ಷಣಗಳು ಕಂಡು ಬಂದಿಲ್ಲ. ಹೀಗಾಗಿ ವೈದ್ಯರ ಸಲಹೆ ಪಡೆದುಕೊಂಡು ಮನೆಯಲ್ಲಿಯೇ ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ತನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ನೀಡಿದ್ದೇನೆ. ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಜುಲೈ4 ರಂದು ಶರತ್ ಬಚ್ಚೇಗೌಡ ದೇವೆಗೌಡರ ನಿವಾಸಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದ್ದರು. ದೇವೇಗೌಡರನ್ನು ಭೇಟಿಯಾದ ಎರಡೇ ದಿನಕ್ಕೆ ಕೊರೊನಾ ಸೋಂಕು ದೃಢಪಟ್ಟಿದೆ.

ಶಾಸಕ ಶರತ್ ಬಚ್ಚೇಗೌಡ ಅವರು ಕಳೆದ ಕೆಲದಿನಗಳಿಂದಲೂ ತಮ್ಮ ಕ್ಷೇತ್ರದಲ್ಲಿನ ಅಭಿವೃದ್ದಿ ಕಾರ್ಯಗಳಲ್ಲಿ ಸಕ್ರೀಯವಾಗಿದ್ದರು. ಜುಲೈ 6ರಂದು ಪೊಲೀಸರು, ಆಶಾ ಕಾರ್ಯಕರ್ತೆಯರನ್ನು ಭೇಟಿಯಾಗಿ ಸಮಸ್ಯೆ ಆಲಿಸುವ ಕಾರ್ಯವನ್ನು ಮಾಡಿದ್ದರು. ಅಲ್ಲದೇ ಜೂನ್ 29ರಂದು ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ಕೊಟ್ಟು ಮಕ್ಕಳಿಗೆ ಧೈರ್ಯ ತುಂಬುವ ಕಾರ್ಯವನ್ನು ಮಾಡಿದ್ದರು. ಇದೀಗ ಸಂಪರ್ಕದಲ್ಲಿರುವವರಿಗೆ ಕೊರೊನಾ ಆತಂಕ ಶುರುವಾಗಿದೆ.

Leave A Reply

Your email address will not be published.