ಮೈಸೂರು : ಕೊರೊನಾ ವೈರಸ್ ಸೋಂಕಿನ ಬೆನ್ನಲ್ಲೇ ರೂಪಾಂತರಿ ಡೆಲ್ಟಾ ಪ್ಲಸ್ ವೈರಸ್ ರಾಜ್ಯಕ್ಕೆ ಕಾಲಿಟ್ಟಿದೆ. ಮೈಸೂರಿನ ಯುವಕನಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಯುವಕನಿಗೆ ಡೆಲ್ಟಾ ವೈರಸ್ ಪತ್ತೆ ಯಾಗಿದೆ. ಸುಮಾರು 40 ಜನರ ಸ್ವಾಬ್ ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ಯುವಕನಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಮೂಲಕ ಕರ್ನಾಟಕಕ್ಕೆ ಮೊದಲ ಡೆಲ್ಟಾ ಪ್ಲಸ್ ಸೋಂಕು ಮೈಸೂರಿನಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದ್ದು, ಬೆಂಗಳೂರು ಹಾಗೂ ಮೈಸೂರಿನ ವ್ಯಕ್ತಿಗಳಿಗೆ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಆರೋಗ್ಯ ಸಚಿವರು ಮಾಹಿತಿಯನ್ನು ಖಚಿತ ಪಡಿಸಿದ್ದಾರೆ.