ಮಂಗಳವಾರ, ಏಪ್ರಿಲ್ 29, 2025
HomeCorona UpdatesNegetive RT-PCR test: ವಿದೇಶಿ ಪ್ರಯಾಣಿಕರಿಗೆ ಋಣಾತ್ಮಕ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

Negetive RT-PCR test: ವಿದೇಶಿ ಪ್ರಯಾಣಿಕರಿಗೆ ಋಣಾತ್ಮಕ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

- Advertisement -

ನವದೆಹಲಿ: (Negetive RT-PCR test) ಚೀನಾ ಮತ್ತು ವಿಶ್ವದ ಇತರ ಭಾಗಗಳಲ್ಲಿ ಕೋವಿಡ್ ಪ್ರಕರಣಗಳ ಭಾರೀ ಏರಿಕೆಯ ಮಧ್ಯೆ, ಚೀನಾ ಮತ್ತು ಇತರ ಐದು ಹೈರಿಸ್ಕ್‌ ದೇಶಗಳಿಂದ ಬರುವ ಪ್ರಯಾಣಿಕರು ಮುಂದಿನ ವಾರದಿಂದ ಋಣಾತ್ಮಕ ಆರ್‌ಟಿ-ಪಿಸಿಆರ್ ವರದಿಗಳನ್ನು ಹೊಂದುವಂತೆ ಭಾರತ ಸರ್ಕಾರ ಕಡ್ಡಾಯಗೊಳಿಸುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜನವರಿಯ ಸುಮಾರಿಗೆ ಭಾರತದಲ್ಲಿ ಕೋವಿಡ್‌ ಉಲ್ಬಣವಾಗುವ ಸಾಧ್ಯತೆಗಳು ಹೆಚ್ಚಿದ್ದು, ಮುಂದಿನ 40 ದಿನಗಳು ನಿರ್ಣಾಯಕವಾಗಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್, ಥೈಲ್ಯಾಂಡ್ ಮತ್ತು ಸಿಂಗಾಪುರದಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮುಂದಿನ ವಾರದಿಂದ ‘ಏರ್ ಸುವಿಧಾ’ ಫಾರ್ಮ್‌ಗಳನ್ನು ಭರ್ತಿ ಮಾಡುವುದು ಮತ್ತು 72 ಗಂಟೆಗಳ ಮೊದಲು ಆರ್‌ಟಿ-ಪಿಸಿಆರ್ ಪರೀಕ್ಷೆ(Negetive RT-PCR test)ಯನ್ನು ಕಡ್ಡಾಯಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ವಿವರಗಳು ಈ ಕೆಳಗಿನಂತಿವೆ;

  • ‘ಏರ್ ಸುವಿಧಾ’ ಫಾರ್ಮ್‌ಗಳನ್ನು ಭರ್ತಿ ಮಾಡುವುದು ಮತ್ತು 72 ಗಂಟೆಗಳ ಮೊದಲು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮುಂದಿನ ವಾರದಿಂದ ಕಡ್ಡಾಯಗೊಳಿಸಬಹುದು.
  • ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್, ಥೈಲ್ಯಾಂಡ್ ಮತ್ತು ಸಿಂಗಾಪುರದಿಂದ ಬರುವ ಪ್ರಯಾಣಿಕರು ಫಾರ್ಮ್ ಅನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು.
  • ವರದಿಗಳ ಪ್ರಕಾರ, ಕಳೆದ ಮೂರು ದಿನಗಳಲ್ಲಿ ಪರೀಕ್ಷೆಗೆ ಒಳಗಾದ 6,000 ವಿದೇಶಿ ಪ್ರಯಾಣಿಕರಲ್ಲಿ 39 ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
  • ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ದೆಹಲಿಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ಪರೀಕ್ಷೆ ಮತ್ತು ಸ್ಕ್ರೀನಿಂಗ್ ಸೌಲಭ್ಯಗಳನ್ನು ಪರಿಶೀಲಿಸಲಿದ್ದಾರೆ.
  • ಕೊರೊನಾ ಉಲ್ಬಣಗೊಂಡ ನಂತರ, ಶನಿವಾರದಿಂದ ಪ್ರತಿ ಅಂತರರಾಷ್ಟ್ರೀಯ ವಿಮಾನದಲ್ಲಿ ಬರುವ ಶೇಕಡಾ ಎರಡರಷ್ಟು ಪ್ರಯಾಣಿಕರಿಗೆ ಯಾದೃಚ್ಛಿಕ ಕೊರೊನಾವೈರಸ್ ಪರೀಕ್ಷೆಯನ್ನು ಸರ್ಕಾರವು ಕಡ್ಡಾಯಗೊಳಿಸಿದೆ.

ಇದನ್ನೂ ಓದಿ : 3 Corona positive case: 3 ವಿದೇಶಿ ಪ್ರಯಾಣಿಕರಿಗೆ ಕೊರೊನಾ ಸೋಂಕು ದೃಢ: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 22 ಕ್ಕೆ ಏರಿಕೆ

ಇದನ್ನೂ ಓದಿ : Brain eating amoeba: ಕೊರೊನಾ ಸೋಂಕು ಬೆನ್ನಲ್ಲೇ ಮೆದುಳು ತಿನ್ನುವ ಅಮೀಬಾ ಆತಂಕ: ಅಷ್ಟಕ್ಕೂ ಇದರ ಗುಣಲಕ್ಷಣಗಳೇನು?

Amid the sharp rise in Covid cases in China and other parts of the world, the Indian government is likely to make it mandatory for travelers from China and five other high-risk countries to carry negative RT-PCR reports from next week, official sources said.

RELATED ARTICLES

Most Popular