ಸೋಮವಾರ, ಏಪ್ರಿಲ್ 28, 2025
HomeCorona UpdatesNew year-New rules: ಹೊಸ ವರ್ಷಾಚರಣೆಗೆ ಬ್ರೇಕ್‌ : ಹೊಸ ಮಾರ್ಗಸೂಚಿ ಪ್ರಕಟಿಸಿದ ಸರಕಾರ

New year-New rules: ಹೊಸ ವರ್ಷಾಚರಣೆಗೆ ಬ್ರೇಕ್‌ : ಹೊಸ ಮಾರ್ಗಸೂಚಿ ಪ್ರಕಟಿಸಿದ ಸರಕಾರ

- Advertisement -

ಬೆಂಗಳೂರು: (New year-New rules) ಕೋವಿಡ್ ವೈರಸ್ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಠಿಣ ರೂಲ್ಸ್ ಗಳನ್ನು ಜಾರಿಗೊಳಿಸಲಾಗಿದೆ. ಕರ್ನಾಟಕದ ಶಾಲೆ, ಕಾಲೇಜು, ಸಿನಿಮಾ ಮಂದಿರಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಹೊಸ ವರ್ಷಾಚರಣೆಗೆ ಪ್ರತ್ಯೇಕ ರೂಲ್ಸ್ ಜಾರಿ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಹೊಸ ವರ್ಷ ಸಮೀಪಿಸುತ್ತಿರುವಾಗಲೇ ಕೊರೊನಾ ಸಂಭ್ರಮಾಚರಣೆಗೆ ಅಡ್ಡಿಯಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿಗಳು (New year-New rules) ಅವಶ್ಯಕವಾಗಿತ್ತು. ಇದೀಗ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು. ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ನಿಯಮಗಳನ್ನು ಜಾರಿಗೆ ತರಲಾಗಿದೆ. ಜೊತೆಗೆ ‌ಹೊಸ ವರ್ಷಾಚರಣೆಗೆ ಪ್ರತ್ಯೇಕವಾದ ನಿಯಮಗಳನ್ನು ಜಾರಿ ಮಾಡಲಾಗಿದೆ.

ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿ ಪ್ರತಿ ವರ್ಷ ಹೊಸ ವರ್ಷದ ಸಂಭ್ರಮಾಚರಣೆ ಅದ್ಧೂರಿಯಾಗಿ ನಡೆಯುತ್ತದೆ. ಪ್ರತಿ ವರ್ಷ ಸಂಭ್ರಮಾಚರಣೆಯಲ್ಲಿ ಸಾವಿರಾರು ಮಂದಿ ಸೇರುತ್ತಾರೆ. ಆದರೆ ಈ ವರ್ಷ ಸಂಭ್ರಮಾಚರಣೆಗೆ ಕೊರೊನಾ ಅಡ್ಡಿಯಾಗಿದ್ದು, ಸಂಭ್ರಮಾಚರಣೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಲೇ ಬೇಕು. ಮಾಸ್ಕ್‌ ಧರಿಸದೇ ಜನಜಂಗುಳಿ ಇರುವ ಪ್ರದೇಶದಲ್ಲಿ ಇರುವಂತಿಲ್ಲ. ಅಲ್ಲದೇ ಹೊಸ ವರ್ಷದ ಆಚರಣೆಯನ್ನು ರಾತ್ರಿ ಒಂದು ಗಂಟೆಯ ಒಳಗಡೆಯಲ್ಲಿ ಮಾಡಲು ಮಾತ್ರ ಅವಕಾಶ ನೀಡಲಾಗುವುದು. ಒಂದು ಗಂಟೆಯ ನಂತರ ಯಾರಿಗೂ ಆಚರಣೆ ನಡೆಸಲು ಅವಕಾಶ ನೀಡದಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌ ತಿಳಿಸಿದ್ದಾರೆ.

ಇದನ್ನೂ ಓದಿ : Vaccine compulsory: ಬಾರ್‌, ಪಬ್‌ ಗೆ ಹೋಗುವ ಮುನ್ನ ಹುಷಾರ್ !‌ 2 ಡೋಸ್‌ ಕೋವಿಡ್ ಲಸಿಕೆ ಕಡ್ಡಾಯ

ಇದನ್ನೂ ಓದಿ : Bodh Mahotsav 2023 : ಬೋಧ ಮಹೋತ್ಸವ 2023: 4 ವಿದೇಶಿಯರಿಗೆ ಕೋವಿಡ್ ಪಾಸಿಟಿವ್

ಇದರ ಜೊತೆಗೆ ರಾಜ್ಯದ ಶಾಲೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಮಾಸ್ಕ್‌ ಕಡ್ಡಾಯ. ಅಂತರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್‌ ಪರೀಕ್ಷೆ ಕಡ್ಡಾಯವಾಗಿ ನಡೆಸಲಾಗುತ್ತದೆ.

(New year-New rules) Strict rules have been implemented in Karnataka in the wake of the fear of the spread of the Covid virus. Masks have been made mandatory in schools, colleges and cinema halls in Karnataka. Also, Revenue Minister R. Ashok said that separate rules have been implemented for the New Year celebrations.

RELATED ARTICLES

Most Popular