ಬೆಂಗಳೂರು : no night curfew :ಕೋವಿಡ್ ಮೂರನೇ ಅಲೆಯ ಹೊಸ್ತಿಲಿನಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕುಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಹೀಗಾಗಿ ಕೊರೊನಾ ಸೋಂಕುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನೈಟ್ ಕರ್ಫ್ಯೂ ಸೇರಿದಂತೆ ಹಲವು ನಿರ್ಬಂಧಗಳನ್ನು ಹೇರಿತ್ತು. ಆದರೆ ರಾಜ್ಯದಲ್ಲಿ ಇದೀಗ ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಇಂದು ಹಲವು ನಿರ್ಬಂಧಗಳಿಂದ ರಿಲೀಫ್ ನೀಡಿದೆ.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವ ಸಂಪುಟದ ಪ್ರಮುಖ ಸಚಿವರು, ತಜ್ಞರು ಹಾಗೂ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದರು. ಈ ಮಹತ್ವದ ಸಭೆಯಲ್ಲಿ ಜನವರಿ 31ರ ಬಳಿಕ ನೈಟ್ ಕರ್ಫ್ಯೂ ಆದೇಶವನ್ನು ತೆರವುಗೊಳಿಸುವ ಬಗ್ಗೆ ನಿರ್ಣಯ ಮಾಡಲಾಗಿದೆ. ಇದರ ಜೊತೆಯಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಆಯ್ದ ಜಿಲ್ಲೆಗಳಲ್ಲಿ ಬಂದ್ ಆಗಿದ್ದ ಶಾಲೆಗಳು ಜನವರಿ 31ರಿಂದ ಎಂದಿನಂತೆ ಪುನಾರಂಭಗೊಳ್ಳಲಿವೆ ಎಂದು ತಿಳಿದುಬಂದಿದೆ.
ಶಾಲೆಗಳ ಪುನಾರಂಭ ವಿಚಾರವಾಗಿ ಸಭೆಯ ಬಳಿಕ ಮಾತನಾಡಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ಕೋವಿಡ್ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಪುನಾರಂಭ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಕೋವಿಡ್ ಸೋಂಕಿನ ಸಂಖ್ಯೆಯಲ್ಲಿ ಏರಿಕೆ ಕಂಡುಬಂದರೆ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಆಯಾ ಜಿಲ್ಲಾಧಿಕಾರಿಗಳ ನಿರ್ಧಾರ ಅಂತಿಮ ಎಂದು ಹೇಳಿದರು.
ನೈಟ್ ಕರ್ಫ್ಯೂ ರದ್ದು ಜೊತೆಯಲ್ಲಿ ರಾಜ್ಯದಲ್ಲಿ 50:50 ರೂಲ್ಸ್ ಜಾರಿಗೆ ತರಲಾಗಿದೆ. ಬಾರ್, ಪಬ್, ಹೋಟೆಲ್, ರೆಸ್ಟಾರೆಂಟ್, ಜಿಮ್ , ಸ್ಮಿಮ್ಮಿಂಗ್ ಪೂಲ್, ಚಿತ್ರ ಮಂದಿರಗಳಲ್ಲಿ ಶೇಕಡಾ 50ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ.ಇದರ ಜೊತೆಯಲ್ಲಿ ದೇವಸ್ಥಾನಗಳಲ್ಲೂ ಭಕ್ತರು ಒಮ್ಮೆಗೆ 50 ಮಾತ್ರ ಸೇವೆಯಲ್ಲಿ ಭಾಗಿಯಾಗಬಹುದಾಗಿದೆ. ಈ 50:50 ರೂಲ್ಸ್ ಜನವರಿ 31ರ ಬಳಿಕವೂ ಮುಂದುವರಿಯಲಿದೆ. ಜಾತ್ರೆ, ರ್ಯಾಲಿ, ಪ್ರತಿಭಟನೆ, ಸಾರ್ವಜನಿಕ ಸಭೆ, ಧಾರ್ಮಿಕ ಸಭೆಗಳಿಗೆ ನಿರ್ಬಂಧ ಮುಂದುವರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
no night curfew from jan31 school reopen
ಇದನ್ನು ಓದಿ : Rayan Raj Sarja : ಅಪ್ಪನ ಸ್ನೇಹಕ್ಕೆ ಜೀವ ತುಂಬಿದ ಮಗ ರಾಯನ್ ಸರ್ಜಾ : ಮೇಘನಾ ರಾಜ್ ಸರ್ಜಾ ಶೇರ್ ಮಾಡಿದ್ರು ಸ್ಪೆಶಲ್ ಪೋಟೋ
ಇದನ್ನೂ ಓದಿ : Yadiyurappa grand daughter suicide : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು