no night curfew : ಜನವರಿ 31ರಿಂದ ರಾಜ್ಯದಲ್ಲಿ ನೈಟ್​ ಕರ್ಫ್ಯೂ ರದ್ದು : ಶಾಲೆಗಳು ಪುನಾರಂಭ

ಬೆಂಗಳೂರು : no night curfew :ಕೋವಿಡ್​ ಮೂರನೇ ಅಲೆಯ ಹೊಸ್ತಿಲಿನಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕುಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಹೀಗಾಗಿ ಕೊರೊನಾ ಸೋಂಕುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನೈಟ್​ ಕರ್ಫ್ಯೂ ಸೇರಿದಂತೆ ಹಲವು ನಿರ್ಬಂಧಗಳನ್ನು ಹೇರಿತ್ತು. ಆದರೆ ರಾಜ್ಯದಲ್ಲಿ ಇದೀಗ ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಇಂದು ಹಲವು ನಿರ್ಬಂಧಗಳಿಂದ ರಿಲೀಫ್​ ನೀಡಿದೆ.


ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವ ಸಂಪುಟದ ಪ್ರಮುಖ ಸಚಿವರು, ತಜ್ಞರು ಹಾಗೂ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದರು. ಈ ಮಹತ್ವದ ಸಭೆಯಲ್ಲಿ ಜನವರಿ 31ರ ಬಳಿಕ ನೈಟ್​ ಕರ್ಫ್ಯೂ ಆದೇಶವನ್ನು ತೆರವುಗೊಳಿಸುವ ಬಗ್ಗೆ ನಿರ್ಣಯ ಮಾಡಲಾಗಿದೆ. ಇದರ ಜೊತೆಯಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಆಯ್ದ ಜಿಲ್ಲೆಗಳಲ್ಲಿ ಬಂದ್​ ಆಗಿದ್ದ ಶಾಲೆಗಳು ಜನವರಿ 31ರಿಂದ ಎಂದಿನಂತೆ ಪುನಾರಂಭಗೊಳ್ಳಲಿವೆ ಎಂದು ತಿಳಿದುಬಂದಿದೆ.


ಶಾಲೆಗಳ ಪುನಾರಂಭ ವಿಚಾರವಾಗಿ ಸಭೆಯ ಬಳಿಕ ಮಾತನಾಡಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್​, ಕೋವಿಡ್​ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಪುನಾರಂಭ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಕೋವಿಡ್​ ಸೋಂಕಿನ ಸಂಖ್ಯೆಯಲ್ಲಿ ಏರಿಕೆ ಕಂಡುಬಂದರೆ ಶಾಲೆಗಳನ್ನು ಬಂದ್​ ಮಾಡುವ ಬಗ್ಗೆ ಆಯಾ ಜಿಲ್ಲಾಧಿಕಾರಿಗಳ ನಿರ್ಧಾರ ಅಂತಿಮ ಎಂದು ಹೇಳಿದರು.


ನೈಟ್​ ಕರ್ಫ್ಯೂ ರದ್ದು ಜೊತೆಯಲ್ಲಿ ರಾಜ್ಯದಲ್ಲಿ 50:50 ರೂಲ್ಸ್​ ಜಾರಿಗೆ ತರಲಾಗಿದೆ. ಬಾರ್​, ಪಬ್​, ಹೋಟೆಲ್​, ರೆಸ್ಟಾರೆಂಟ್​​, ಜಿಮ್​ , ಸ್ಮಿಮ್ಮಿಂಗ್​ ಪೂಲ್​, ಚಿತ್ರ ಮಂದಿರಗಳಲ್ಲಿ ಶೇಕಡಾ 50ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ.ಇದರ ಜೊತೆಯಲ್ಲಿ ದೇವಸ್ಥಾನಗಳಲ್ಲೂ ಭಕ್ತರು ಒಮ್ಮೆಗೆ 50 ಮಾತ್ರ ಸೇವೆಯಲ್ಲಿ ಭಾಗಿಯಾಗಬಹುದಾಗಿದೆ. ಈ 50:50 ರೂಲ್ಸ್​ ಜನವರಿ 31ರ ಬಳಿಕವೂ ಮುಂದುವರಿಯಲಿದೆ. ಜಾತ್ರೆ, ರ್ಯಾಲಿ, ಪ್ರತಿಭಟನೆ, ಸಾರ್ವಜನಿಕ ಸಭೆ, ಧಾರ್ಮಿಕ ಸಭೆಗಳಿಗೆ ನಿರ್ಬಂಧ ಮುಂದುವರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

no night curfew from jan31 school reopen

ಇದನ್ನು ಓದಿ : Rayan Raj Sarja : ಅಪ್ಪನ ಸ್ನೇಹಕ್ಕೆ ಜೀವ ತುಂಬಿದ ಮಗ ರಾಯನ್‌ ಸರ್ಜಾ : ಮೇಘನಾ ರಾಜ್ ಸರ್ಜಾ ಶೇರ್ ಮಾಡಿದ್ರು ಸ್ಪೆಶಲ್ ಪೋಟೋ

ಇದನ್ನೂ ಓದಿ : Yadiyurappa grand daughter suicide : ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು

Comments are closed.