Omicron Alert : ಕರ್ನಾಟಕ ಗಡಿಗಳಲ್ಲಿ ಕಟ್ಟೆಚ್ಚರ : ರಾಜ್ಯ ಪ್ರವೇಶಕ್ಕೆ RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ

ಬೆಂಗಳೂರು : ವಿದೇಶದಲ್ಲಿ ಕೊರೋನಾ ರೂಪಾಂತರ ತಳಿಯ (Omicron Alert) ಆರ್ಭಟ ಹೆಚ್ಚಿರುವ ಬೆನ್ನಲ್ಲೇ ರಾಜ್ಯದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವ ದಲ್ಲಿ ಮಹತ್ವದ ಸಭೆ ನಡೆದಿದೆ. ಕೊರೋನಾ ಎಕ್ಸಪರ್ಟ್ ಸಮಿತಿ ಅಧ್ಯಕ್ಷರು, ಸಚಿವರುಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ರಾಜ್ಯದ ಗಡಿಭಾಗದ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ್ದು, ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ. ಇನ್ನು
ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು ಇಂತಿವೆ.

  • ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.
  • ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.
  • ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.
  • 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು
  • ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು.
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
  • ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.
  • ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.
  • ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
  • ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.

ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು. ಇದಲ್ಲದೇ ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಗೆ ಹೊಸ ಮಾರ್ಗಸೂಚಿ ಬಿಡುಗಡೆಯಾಗಲಿದ್ದು, ಈ ಬಗ್ಗೆ ಸಿಎಂ ಸೋಮವಾರ ಮತ್ತೊಂದು ಸುತ್ತಿನ ಮತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ : African variant covid : ದಕ್ಷಿಣ ಆಫ್ರಿಕಾದ ಕೊರೊನಾ ಭೀತಿ : 6 ಆಫ್ರಿಕನ್ ದೇಶಗಳಿಂದ ವಿಮಾನ ನಿಷೇಧಿಸಿದ ಬೆಹರಿನ್‌

ಇದನ್ನೂ ಓದಿ : Omicron Virus:ಮತ್ತೆ ಕೊರೊನಾತಂಕ, ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಿದ ಬಿಬಿಎಂಪಿ

(Omicron Alert : Karnataka Entry RTPCR Negative Report Mandatory CM Basavaraj Bommai order)

Comments are closed.