Omicron Karnataka : ಕರ್ನಾಟಕಕ್ಕೆ ಒಮಿಕ್ರಾನ್‌ ಭೀತಿ : ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೊನಾ ಸೋಂಕು ದೃಢ !

ಬೆಂಗಳೂರು : ವಿಶ್ವದಾದ್ಯಂತ ಒಮಿಕ್ರಾನ್‌ ಭಯ ಕಾಡುತ್ತಿದೆ. ಇದರೀಗ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಅಪಾಯಕಾರಿ ವೈರಸ್‌ ಇದೀಗ ಕರುನಾಡಿಗೆ (Omicron Karnataka )ಆತಂಕವನ್ನು ತಂದೊಡ್ಡಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ. ಆದರೆ ಇದು ಒಮಿಕ್ರಾನ್‌ ಸೋಂಕೇ ಅನ್ನೋದು ದೃಢಪಟ್ಟಿಲ್ಲ, ಆದರೂ ಪ್ರಯಾಣಿಕರಲ್ಲಿ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ.

ಆಫ್ರಿಕಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಕೊರೊನಾ ರೂಪಾಂತರಿ ಒಮಿಕ್ರಾನ್‌ ವೈರಸ್‌ ಹರಡುವಿಕೆಯ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆಯನ್ನು ನೀಡಿದೆ. ಇದೀಗ ಬೆಂಗಳೂರಿಗೆ ಬಂದಿಳಿದ ಒಟ್ಟು ೮೪ ಪ್ರಯಾಣಿಕರ ಪೈಕಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಇಬ್ಬರ ಸ್ವ್ಯಾಬ್‌ಗಳನ್ನೂ ಪ್ರಯೋಗಾಲಕ್ಕೆ ಕಳುಹಿಸಲಾಗಿತ್ತು. ಆದರೆ ಇದು ಒಮಿಕ್ರಾನ್‌ ಅಲ್ಲ ಬದಲಾಗಿ ಡೆಲ್ಟಾ ಪ್ಲಸ್‌ ಸೋಂಕು ಅನ್ನೋದನ್ನು ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಹೀಗಾಗಿ ಕರುನಾಡ ಜನರು ನೆಮ್ಮದಿ ಬಿಡುವಂತಾಗಿದೆ.

ಒಮಿಕ್ರಾನ್‌ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಯಾಣಿಕರ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲದೇ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನೀಡಲಾಗಿದ್ದ ಅನುಮತಿಯನ್ನು ಮರುಪರಿಶೀಲನೆ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಕೂಡ ಹದ್ದಿನಕಣ್ಣು ಇರಿಸಲಾಗುತ್ತಿದೆ.

ರಾಜ್ಯದಲ್ಲಿ Omicron ಬಗ್ಗೆ ಕಟ್ಟೆಚ್ಚವಹಿಸಲು ಸಿಎಂ ಬೊಮ್ಮಾಯಿ ಸೂಚನೆ

ರಾಜ್ಯದಲ್ಲಿ ಕಡಿಮೆಯಾಗಿದ್ದ ಕೊರೊನಾ ವೈರಸ್‌ ಸೋಂಕು ಇತ್ತೀಚಿನ ದಿನಗಳಲ್ಲಿ ಹೆಚ್ಚಳವಾಗುತ್ತಿದೆ. ಅದ್ರಲ್ಲೂ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಜೊತೆಗೆ ದಕ್ಷಿಣ ಆಫ್ರಿಕಾದ ಒಮಿಕ್ರಾನ್‌ ವೈರಸ್‌ ಸೋಂಕಿನ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದ್ದಾರೆ. ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರಾಜ್ಯಕ್ಕೆ ಆಗಮಿಸುವ ಅಂತರಾಷ್ಟ್ರೀಯ ಹಾಗೂ ಹೊರ ರಾಜ್ಯದ ಪ್ರಯಾಣಿಕರ ಮೇಲೆಯೂ ಹದ್ದಿನ ಕಣ್ಣು ಇರಿಸಲಾಗಿದೆ. ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

  • ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.
  • ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.
  • ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.
  • 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು
  • ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು.
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
  • ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.
  • ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.
  • ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
  • ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.

ಇದನ್ನೂ ಓದಿ : ದಕ್ಷಿಣ ಆಫ್ರಿಕಾದ ಕೊರೊನಾ ಭೀತಿ : 6 ಆಫ್ರಿಕನ್ ದೇಶಗಳಿಂದ ವಿಮಾನ ನಿಷೇಧಿಸಿದ ಬೆಹರಿನ್‌

ಇದನ್ನೂ ಓದಿ : ಕರ್ನಾಟಕ ಗಡಿಗಳಲ್ಲಿ ಕಟ್ಟೆಚ್ಚರ : ರಾಜ್ಯ ಪ್ರವೇಶಕ್ಕೆ RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ

(Omicron Karnataka fear, Two South Africa returnees test Covid positive in Bengaluru Airport)

Comments are closed.