Omicron treatment Private Hospital : ಓಮಿಕ್ರಾನ್ ರೋಗಿಗಳ ಬೇಡಿಕೆಗೆ ಮಣಿದ ಸರ್ಕಾರ: ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ

ಬೆಂಗಳೂರು : ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳ ನಡುವೆಯೂ ರಾಜ್ಯದಲ್ಲಿ ನಿಧಾನಕ್ಕೆ ಕೊರೋನಾ ಹಾಗೂ ಓಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಈ ಮಧ್ಯೆ ಸೋಂಕಿತರ ಚಿಕಿತ್ಸೆಗೆ ಸರ್ಕಾರ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯವಸ್ಥೆ ಕಲ್ಪಿಸಿದೆ. ಆದರೆ ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹಿಂದೇಟು ಹಾಕುತ್ತಿದ್ದು ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ(Omicron treatment Private Hospital) ತಮ್ಮದೇ ಖರ್ಚಿನಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ಅವಕಾಶ ಕಲ್ಲಿಸಿದೆ.

ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಂಪೇಗೌಡ್ ಇಂಟರನ್ಯಾಶನಲ್ ಏರ್ಪೋರ್ಟ್ ನಲ್ಲಿ ಕಠಿಣ ಕ್ರಮ ರೂಪಿಸಿದೆ. ಹೈರಿಸ್ಕ್ ದೇಶದಿಂದ ಬಂದವರನ್ನು ೬ ಹಂತದಲ್ಲಿ ಪರೀಕ್ಷೆಗೆ ಒಳಪಡಿಸಿ ಕೊರೋನಾ ನೆಗೆಟಿವ್ ಬಂದರೆ ಹೊರಕ್ಕೆ ಬಿಡಲಾಗುತ್ತಿದೆ. ಇನ್ನೊಂದೆಡೆ ಕೊರೋನಾ ಅಥವಾ ಓಮಿಕ್ರಾನ್ ಕಾಣಿಸಿಕೊಂಡರೇ ಅಂತಹವರನ್ನು ಸರ್ಕಾರ ನಗರದ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದೆ.

ಆದರೇ ದೇಶಿ ಹಾಗೂ ವಿದೇಶಿ ಕೋವಿಡ್ ಸೋಂಕಿತರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಲು ಹಿಂದೇಟು ಹಾಕುತ್ತಿದ್ದು, ಖಾಸಗಿ ಆಸ್ಪತ್ರೆಗೆ ಸೇರಿಸುವಂತೆ ಮನವಿ‌ ಮಾಡುತ್ತಿದ್ದಾರಂತೆ. ಸೋಂಕಿತರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಬೇಡ ದಯವಿಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಎಂದು ಮನವಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು, ರೋಗಿಗಳು ಸ್ವಂತ ವೆಚ್ಚದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದಿದೆ.

ಸರಕಾರ ಸದ್ಯ ಓಮಿಕ್ರಾನ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯನ್ನು ಗುರುತಿಸಿದ್ದು ಬೌರಿಂಗ್ ಆಸ್ಪತ್ರೆಯಲ್ಲಿ ಸರ್ಕಾರಿ ವೆಚ್ಚದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ. ಆದರೆ ವಿದೇಶಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಲು ಮನಸ್ಸು ಮಾಡುತ್ತಿಲ್ಲ. ಹೀಗಾಗಿ ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಪ್ರಯಾಣಿಕರ ಮನವಿಯನ್ನು ಪುರಸ್ಕರಿಸಿದ್ದು, ಓಮಿಕ್ರಾನ್ ಹಾಗೂ ಕೊರೋನಾ ಸೋಂಕಿತರು ಇಚ್ಛಿಸಿದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದಿದೆ.

ಆದರೆ ಖಾಸಗಿ ಆಸ್ಪತ್ರೆಯಲ್ಲಿ ಓಮಿಕ್ರಾನ್ ರೋಗಿಗಳ ಚಿಕಿತ್ಸೆ ಮತ್ತು ಡಿಸ್ಚಾರ್ಜ್ ವೇಳೆ ಯಾವ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು ಖಾಸಗಿ ಆಸ್ಪತ್ರೆಗಳು ರೋಗಿಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಮುನ್ನ ಆರೋಗ್ಯ ಇಲಾಖೆಯ ಗೈಡ್ ಲೈನ್ಸ್ ಫಾಲೋ ಮಾಡೋದು ಕಡ್ಡಾಯ ಎಂದಿದೆ.

ಇದನ್ನೂ ಓದಿ : ಪ್ರಧಾನಿ ಮೋದಿ, ಅಮಿತ್​ ಶಾ, ಪ್ರಿಯಾಂಕಾ ಚೋಪ್ರಾ… ಅಬ್ಬಬ್ಬಾ..! ತಲೆ ತಿರುಗಿಸುತ್ತೆ ಈ ಗ್ರಾಮದ ಕೋವಿಡ್​ ಪರೀಕ್ಷಾ ಪಟ್ಟಿ ವಿವರ

ಇದನ್ನೂ ಓದಿ : Corona Rules Break : ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ರೆ ಬೀಳುತ್ತೆ ಫೈನ್ : 14 ಕೋಟಿ ದಂಡ‌ ಸಂಗ್ರಹಿಸಿದ ಬಿಬಿಎಂಪಿ

ಇದನ್ನೂ ಓದಿ : Omicron variant fear : ಹೆಚ್ಚುತ್ತಿದೆ ಓಮಿಕ್ರಾನ್ ಆತಂಕ: ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ

Omicron treatment Private Hospital : Karnataka Government Release New Guidelines

Comments are closed.