Omicron Variant : ಕರ್ನಾಟಕದಲ್ಲಿ ಪತ್ತೆಯಾಗಿಲ್ಲ ಓಮಿಕ್ರಾನ್‌ : ಸಿಎಂ ಬಸವರಾಜ್‌ ಬೊಮ್ಮಾಯಿ

ಬೆಂಗಳೂರು : ವಿಶ್ವದಾದ್ಯಂತ ತಲ್ಲಣ ಮೂಡಿಸಿರುವ ಓಮಿಕ್ರಾನ್‌ (Omicron Variant) ಭಯ ಇದೀಗ ಕರ್ನಾಟಕವನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡುತ್ತಿದೆ. ಆಫ್ರಿಕಾ ದೇಶಗಳಲ್ಲಿ ಹೆಚ್ಚುತ್ತಿರುವ ಓಮಿಕ್ರಾನ್‌ ರಾಜ್ಯಕ್ಕೆ ಕಾಲಿಡದಂತೆ ಎಚ್ಚರವಹಿಸುತ್ತಿರುವ ಬೆನ್ನಲ್ಲೇ ಕರ್ನಾಟಕ ದಲ್ಲಿ ಇದುವರೆಗೆ ಓಮಿಕ್ರಾನ್‌ ವೈರಸ್‌ ಪತ್ತೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ( Basavaraj Bommai ) ಅವರು ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ( Basavaraj Bommai ) ಅವರು, ಓಮಿಕ್ರಾನ್‌ ಸೋಂಕು ಜೊತೆಯಲ್ಲೇ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ. ವಿದೇಶಗಳಿಂದ ಆಗಮಿಸುವವರ ಮೇಲೆ ನಿಗಾ ಇರಿಸುವ ನಿಟ್ಟಿನಲ್ಲಿ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯಗೊಳಿಸಲಾಗಿದೆ. ಇನ್ನೊಂದೆಡೆಯಲ್ಲಿ ರಾಜ್ಯ ಗಡಿಭಾಗದಲ್ಲಿಯೂ ತಪಾಸಣಾ ಕಾರ್ಯ ನಡೆಸಲಾಗುತ್ತಿದೆ ಎಂದಿದ್ದಾರೆ.

ಧಾರವಾಡದ ಎಸ್‌ಡಿಎಂ ಮೆಡಿಕಲ್‌ ಕಾಲೇಜಿನಲ್ಲಿ ಉಂಟಾಗಿರುವ ಕೋವಿಡ್ ಸ್ಪೋಟಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಿ ಸದ್ಯ ಆಸ್ಪತ್ರೆಯ ಒಪಿಡಿ ಬಂದ್‌ ಮಾಡಲಾಗಿದ್ದು, ಎಲ್ಲಾ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ. ಏರ್‌ಪೋರ್ಟ್‌ಗಳಲ್ಲಿ ಕಡ್ಡಾಯವಾಗಿ ನೆಗೆಟಿವ್‌ ಇರೋರಿಗೆ ಮಾತ್ರ ವಿಮಾನ ನಿಲ್ದಾಣದಿಂದ ಅವಕಾಶ ನೀಡಲಾಗುತ್ತದೆ. ಆರೋಗ್ಯ ಇಲಾಖೆಯ ಸಿಬ್ಬಂಧಿಗಳಿಗೆ ಬೂಸ್ಟರ್‌ ಡೋಸ್‌ ಲಸಿಕೆ ನೀಡುವ ಕುರಿತು ಕೇಂದ್ರ ಸರಕಾರಕ್ಕೆ ಮನವಿಯನ್ನು ಮಾಡಲಾಗಿದೆ. ಅಲ್ಲದೇ ವಿದೇಶಿ ವಿಮಾನಗಳನ್ನು ರದ್ದು ಮಾಡುವ ಕುರಿತು ಕೇಂದ್ರ ಸರಕಾರಕ್ಕೆ ಮನವಿಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆಫ್ರಿಕಾದಿಂದ ವಾಪಾಸಾದ ಇಬ್ಬರಿಗೆ ಡೆಲ್ಟಾ ಫ್ಲಸ್‌ ಸೋಂಕು

ಆಫ್ರಿಕಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಕೊರೊನಾ ರೂಪಾಂತರಿ ಒಮಿಕ್ರಾನ್‌ ವೈರಸ್‌ ಹರಡುವಿಕೆಯ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆಯನ್ನು ನೀಡಿದೆ. ಇದೀಗ ಬೆಂಗಳೂರಿಗೆ ಬಂದಿಳಿದ ಒಟ್ಟು 84 ಪ್ರಯಾಣಿಕರ ಪೈಕಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಇಬ್ಬರ ಸ್ವ್ಯಾಬ್‌ಗಳನ್ನೂ ಪ್ರಯೋಗಾಲಕ್ಕೆ ಕಳುಹಿಸಲಾಗಿತ್ತು. ಆದರೆ ಇದು ಒಮಿಕ್ರಾನ್‌ (Omicron Variant ) ಅಲ್ಲ ಬದಲಾಗಿ ಡೆಲ್ಟಾ ಪ್ಲಸ್‌ ಸೋಂಕು ಅನ್ನೋದನ್ನು ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಹೀಗಾಗಿ ಕರುನಾಡ ಜನರು ನೆಮ್ಮದಿ ಬಿಡುವಂತಾಗಿದೆ.

ಒಮಿಕ್ರಾನ್‌ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಯಾಣಿಕರ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲದೇ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನೀಡಲಾಗಿದ್ದ ಅನುಮತಿಯನ್ನು ಮರುಪರಿಶೀಲನೆ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಕೂಡ ಹದ್ದಿನಕಣ್ಣು ಇರಿಸಲಾಗು ತ್ತಿದೆ. ರಾಜ್ಯದಲ್ಲಿ ಕಡಿಮೆಯಾಗಿದ್ದ ಕೊರೊನಾ ವೈರಸ್‌ ಸೋಂಕು ಇತ್ತೀಚಿನ ದಿನಗಳಲ್ಲಿ ಹೆಚ್ಚಳವಾಗುತ್ತಿದೆ. ಅದ್ರಲ್ಲೂ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಜೊತೆಗೆ ದಕ್ಷಿಣ ಆಫ್ರಿಕಾದ ಒಮಿಕ್ರಾನ್‌ ವೈರಸ್‌ ಸೋಂಕಿನ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚನೆಯನ್ನು ನೀಡಿದೆ. ಈ ಹಿನ್ನೆಲೆ ಯ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದ್ದಾರೆ. ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರಾಜ್ಯಕ್ಕೆ ಆಗಮಿಸುವ ಅಂತರಾಷ್ಟ್ರೀಯ ಹಾಗೂ ಹೊರ ರಾಜ್ಯದ ಪ್ರಯಾಣಿಕರ ಮೇಲೆಯೂ ಹದ್ದಿನ ಕಣ್ಣು ಇರಿಸಲಾಗಿದೆ. ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

  • ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.
  • ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.
  • ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.
  • 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು
  • ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು.
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
  • ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.
  • ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.
  • ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
  • ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.

ಇದನ್ನೂ ಓದಿ : SDM ಕಾಲೇಜಿನಲ್ಲಿ ಕೊರೊನಾ ಸ್ಪೋಟ : 306 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಇದನ್ನೂ ಓದಿ : ಕರ್ನಾಟಕಕ್ಕೆ ಒಮಿಕ್ರಾನ್‌ ಭೀತಿ : ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೊನಾ ಸೋಂಕು ದೃಢ !

( Omicron Variant : CM Basavaraj Bommai is not found in Karnataka )

Comments are closed.