1- 7ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು : ರಾಜ್ಯ ಸಚಿವ ಸಂಪುಟದ ಮಹತ್ವದ ತೀರ್ಮಾನ

0

ಬೆಂಗಳೂರು : ರಾಜ್ಯದಲ್ಲಿ 1 ರಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ಯಾವುದೇ ಕಾರಣಕ್ಕೂ ಆನ್ ಲೈನ್ ಶಿಕ್ಷಣವನ್ನು ನೀಡುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶಿಸಿದೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಖಾಸಗಿ ಶಾಲೆಗಳು ಆನ್ ಲೈನ್ ಶಿಕ್ಷಣ ನೀಡುವುದಕ್ಕೆ ಮುಂದಾಗಿರುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ನಿನ್ನೆ ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವರು 1 ರಿಂದ 5ನೇ ತರಗತಿ ವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡುವಂತಿಲ್ಲ ಎಂದು ಘೋಷಣೆ ಮಾಡಿದ್ದರು. ಆದ್ರಿಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ತರಗತಿಯ ವರೆಗೂ ಆನ್ ಲೈನ್ ಶಿಕ್ಷಣವನ್ನು ಬೋಧಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಇನ್ನು ಎಸ್ಎಸ್ಎಲ್ ಸಿ ಪರೀಕ್ಷೆಯ ಬಗ್ಗೆ ಯಾವುದೇ ಗೊಂದಲಗಳು ಬೇಡ. ಎಸ್ಎಸ್ಎಲ್ ಸಿ ಪರೀಕ್ಷೆ ನಿಗದಿತ ದಿನಾಂಕದಂದೇ ನಡೆಯುತ್ತದೆ. ಅಲ್ಲದೇ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

Leave A Reply

Your email address will not be published.