new COVID cases :ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 22, 775 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 406 ಮಂದಿ ಕೋವಿಡ್ನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 3,42,75,312 ಆಗಿದೆ. ಅಲ್ಲದೇ ಕಳೆದ 24 ಗಂಟೆಗಳಲ್ಲಿ 8949 ಮಂದಿ ಕೋವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ರಿಕವರಿ ರೇಟ್ 98.32 ಪ್ರತಿಶತವಾಗಿದ್ದು 2020ರ ಮಾರ್ಚ್ ಬಳಿಕ ಇದೇ ಅತ್ಯಧಿಕ ರಿಕವರಿ ರೇಟ್ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಇತ್ತ ಓಮಿಕ್ರಾನ್ ರೂಪಾಂತರಿಯ ಪ್ರಕರಣದಲ್ಲಿಯೂ ಏರಿಕೆ ಕಂಡುಬಂದಿದೆ. ದೇಶದಲ್ಲಿ ಒಟ್ಟು 1431 ಓಮಿಕ್ರಾನ್ ಪ್ರಕರಣಗಳು ವರದಿಯಾದಂತಾಗಿದೆ. ಓಮಿಕ್ರಾನ್ ರೂಪಾಂತರಿಯು ದೇಶದ 23 ರಾಜ್ಯಗಳಿಗೆ ವ್ಯಾಪಿಸಿದ್ದು ಇದರಲ್ಲಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಅಂದರೆ 454 ಪ್ರಕರಣ ಹಾಗೂ ದೆಹಲಿಯಲ್ಲಿ 351 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.
ಇನ್ನು ದೇಶದಲ್ಲಿ ಪ್ರಸ್ತುತ 1,04,781 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ರಾಷ್ಟ್ರೀಯ ಲಸಿಕಾ ಅಭಿಯಾನದ ಅಡಿಯಲ್ಲಿ 145.16 ಕೋಟಿ ಲಸಿಕೆಯ ಡೋಸ್ಗಳನ್ನು ನೀಡಲಾಗಿದೆ.
ದೇಶದಲ್ಲಿ ಒಟ್ಟು 4,81,486 ಮಂದಿ ಕೊರೊನಾದಿಂದಾಗಿ ಸಾವಿಗೀಡಾದಂತಾಗಿದೆ. ಡಿಸೆಂಬರ್ 31ರವರೆಗೆ 67,89,89,110 ಸ್ಯಾಂಪಲ್ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ. ಇದರಲ್ಲಿ ಒಂದು ದಿನದಲ್ಲಿ 11,10,855 ಸ್ಯಾಂಪಲ್ಗಳನ್ನು ಪರೀಕ್ಷೆ ಮಾಡಲಾಗಿದೆ.
ಈ ನಡುವೆ ಕೇರಳದಲ್ಲಿ ಅತೀ ಹೆಚ್ಚು ಅಂದರೆ 2676 ಕೋವಿಡ್ ಪ್ರಕರಣಗಳು ಶುಕ್ರವಾರ ವರದಿಯಾಗಿದೆ. ಹಾಗೂ ಕೇರಳವೊಂದೇ ಕಳೆದ 24 ಗಂಟೆಗಳಲ್ಲಿ 353 ಕೋವಿಡ್ ಸಾವುಗಳನ್ನು ವರದಿ ಮಾಡಿದೆ.
Over 22,500 new COVID cases, 406 fatalities in last 24 hours; active cases rise to 1 lakh
ಇದನ್ನು ಓದಿ : Maharashtra Lockdown : ಓಮಿಕ್ರಾನ್ ಆರ್ಭಟ ಮುಂಬೈನಲ್ಲಿ15 ದಿನ ಕಠಿಣ ನಿರ್ಬಂಧ, ಸಂಜೆ 5 ರಿಂದ ಬೆಳಿಗ್ಗೆ 5 ರವರೆಗೆ ಎಲ್ಲವೂ ಬಂದ್
ಇದನ್ನೂ ಓದಿ : Gujarat High Court : ದಂಪತಿ ನಡುವಿನ ಲೈಂಗಿಕ ಸಂಬಂಧದ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು