ಆಕ್ಸಿಜನ್ ಕೊರತೆಯಿಂದ 23 ಮಂದಿ ಸತ್ತರೂ, ಇನ್ನೂ ಮೊಂಡುತನ ಬಿಡದ ಉಸ್ತುವಾರಿ ಸಚಿವ ಸುರೇಶ್ ಕುಮಾರ್

ಚಾಮರಾಜನಗರ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಸೋಂಕು ನಿಯಂತ್ರಣ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕಳೆದ 24 ಗಂಟೆಗಳ ಅವಧಿಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ರಾತ್ರಿ 16, ಬೆಳಗಿನ ಜಾವ 6 ಕ್ಕೂ ಹೆಚ್ಚು ಜನ ಆಕ್ಸಿಜನ್ ಕೊರತೆಯಿಂದ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. 24 ಮಂದಿ ಸಾವನ್ನಪ್ಪಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಯಾಗಿರುವ ಕುರಿತು ರೋಗಿಗಳ ಸಂಬಂಧಿಕರು ಆರೋಪ ಮಾಡುತ್ತಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.

ಚಾಮರಾಜನಗರದಲ್ಲಿ 23 ಮಂದಿ ಸಾವನ್ನಪ್ಪಿದ್ದರೂ ಕೂಡ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಫೇಸ್ ಬುಕ್ ಬಿಟ್ಟು ಹೊರಬರುವ ಲಕ್ಷಣ ಗೋಚರಿಸುತ್ತಿಲ್ಲ. ಚಾಮರಾಜನಗರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವ ಬದಲು ಸಚಿವ ಸುರೇಶ್ ಕುಮಾರ್ ಬೆಂಗಳೂರಲ್ಲಿ ಸುದ್ದಿಗೋಷ್ಟಿ ನಡೆಸಿ, ಆಕ್ಸಿಜನ್ ಕೊರತೆಯಿಂದ ಜನರು ಸತ್ತಿಲ್ಲ ಎನ್ನುವ ಮೂಲಕ ಮೊಂಡುತನ, ನಿರ್ಲಕ್ಷ್ಯವನ್ನು ತೋರುತ್ತಿದ್ದಾರೆ. ಸಾಲದಕ್ಕೆ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳುವುದಾಗಿ ಹೇಳುತ್ತಿದ್ದಾರೆ. ಆದರೆ ಜನರ ಸಾವಿನಲ್ಲಿ ಸಚಿವರ ಪಾಲೂ ಇದೆ ಅನ್ನೋದನ್ನು ಸಚಿವರು ಮರೆತಂತೆ ಕಾಣುತ್ತಿದೆ.

ಆಕ್ಸಿಜನ್ ಕೊರತೆಯ ಹಿನ್ನೆಲೆಯಲ್ಲಿ 23 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಚಾಮರಾಜನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಇಷ್ಟೊಂದು ಸಂಖ್ಯೆಯಲ್ಲಿ ಸಾವು ಸಂಭವಿಸಿದ್ದರೂ ಕೂಡ ಸುರೇಶ್ ಕುಮಾರ್ ಅಸಡ್ಡೆ ವಹಿಸುತ್ತಿರೋದು ಜನರ ಮೇಲಿನ ಕಾಳಜಿಯನ್ನು ತೋರಿಸುತ್ತಿದೆ ಅನ್ನೋ ಆರೋಪ ಕೇಳಿಬಂದಿದೆ. 

Comments are closed.