ಕಲಬುರಗಿ : ರಾಜ್ಯದಲ್ಲಿಯೂ ಆಮ್ಲಜನಕ ಕೊರತೆ ಉಂಟಾಗಿದೆ. ಕಲಬುರಗಿಯಲ್ಲಿ ಆಮ್ಲಜನಕ ಪೂರೈಕೆ ಸ್ಥಗಿತವಾದ ಹಿನ್ನೆಲೆಯಲ್ಲಿ ನಾಲ್ವರು ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ.
ಕಲಬುರಗಿ ನಗರದ ಕೆಬಿಎನ್ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯು ತ್ತಿದ್ದವರಿಗೆ ಆಮ್ಲಜನಕ ಪೂರೈಕೆ ಸ್ಥಗಿತವಾಗಿದೆ. ಇದರಿಂದಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಅಮ್ಲಜನಕ ಖಾಲಿಯಾಗುತ್ತಿದ್ದಂತೆಯೇ ಆಸ್ಪತ್ರೆಯ ಸಿಬ್ಬಂದಿಗಳು ರೋಗಿಗಳನ್ನು ಬೇರೆಯ ಆಸ್ಪತ್ರೆಗೆ ಸ್ಥಳಾಂತರ ಮಾಡಲು ಯತ್ನಿಸಿ ದ್ದಾರೆ. ಆದರೆ ಸಾಗಿಸುವ ಮೊದಲೇ ನಾಲ್ವರು ರೋಗಿಗಳು ಮೃತಪಟ್ಟಿದ್ದಾರೆ.
