ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ ! ವಿದ್ಯಾರ್ಥಿಗಳಿಗೆ ಶುರುವಾಯ್ತು ಆತಂಕ

0

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡಿದೆ. ಪರೀಕ್ಷೆ ಮುಗಿದ ಮರುದಿನವೇ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.

ಬೆಂಗಳೂರಿನ ಜಯನಗರ 4ನೇ ಬ್ಲಾಕ್ ನಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ. ವಿದ್ಯಾರ್ಥಿನಿಯ ಜೊತೆಗೆ ಕೊಠಡಿಯಲ್ಲಿ ಇನ್ನೂ 14 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದೀಗ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.

ಕೊರೊನಾ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ ವಿದ್ಯಾರ್ಥಿನಿಯನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಆದರೆ ವಿದ್ಯಾರ್ಥಿನಿ ಕೈಯಲ್ಲಿದ್ದ ಕ್ವಾರಂಟೈನ್ ಸೀಲ್ ಅಳಿಸಿಕೊಂಡು, ಅಧಿಕಾರಿಗಳ ಕಣ್ಣು ತಪ್ಪಿಸಿ ಪರೀಕ್ಷೆಗೆ ಹಾಜರಾಗಿದ್ದಳು. ಇದೀಗ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆತಂಕ ಶುರುವಾಗಿದೆ.

ಈ ಕುರಿತು ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಣ ಸಚಿವರ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಕುರಿತು ಪರಿಶೀಲನೆ ನಡೆಸುತ್ತೇನೆ. ವಿದ್ಯಾರ್ಥಿನಿಗೆ ಯಾವುದೇ ರೋಗ ಲಕ್ಷಣಗಳಿಲ್ಲದೇ ಇರಬಹುದು ಎಂದಿದ್ದಾರೆ.

Leave A Reply

Your email address will not be published.