Quarantine cancels: ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಆದೇಶ ಹಿಂಪಡೆದ ಆರೋಗ್ಯ ಇಲಾಖೆ

ಬೆಂಗಳೂರು: (Quarantine cancels) ಹೈರಿಸ್ಕ್‌ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ನಿಗಾ ಇಡಲಾಗಿದ್ದು, ವಿದೇಶಿ ಪ್ರಯಾಣಿಕರಿಗೆ ಏಳು ದಿನಗಳ ಕ್ವಾರಂಟೈನ್‌ ಕಡ್ಡಾಯ ಮಾಡಲಾಗಿದ್ದು, ಇದೀಗ ಕ್ವಾರಂಟೈನ್‌ ಕಡ್ಡಾಯ ಅದೇಶವನ್ನು ಆರೋಗ್ಯ ಇಲಾಖೆ ಹಿಂಪಡೆದಿದ್ದು, ಈ ಹಿಂದೆ ಕೇಂದ್ರ ಸರಕಾರ ಸೂಚಿಸಿದ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಿದೆ.

ರಾಜ್ಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸುಗಳ ಪ್ರಕಾರ, ಹಾಂಗ್‌ ಕಾಂಗ್‌, ಸಿಂಗಾಪುರ , ಚೀನಾ, ಜಪಾನ್‌, ಥೈಲ್ಯಾಂಡ್‌ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಹೈರಿಸ್ಕ್‌ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡಲಾಗಿದ್ದು, ಇವರಿಗೆ ಏಳು ದಿನಗಳ ಕಾಲ ಕ್ವಾರಂಟೈನ್‌ ಕಡ್ಡಾಯ ಮಾಡಲಾಗಿತ್ತು. ಆದರೆ ಇದೀಗ ಆರೋಗ್ಯ ಇಲಾಖೆ ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್‌ ಕಡ್ಡಾಯ (Quarantine cancels) ಎಂಬ ಆದೇಶವನ್ನು ಹಿಂಪಡೆದಿದೆ. ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಈ ಹಿಂದೆ ನೀಡಿದ ಮಾರ್ಗಸೂಚಿಗಳನ್ನೇ ಅನುಸರಿಸಬೇಕು ಎಂದು ಹೇಳಿದೆ.

ಕ್ವಾರಂಟೈನ್‌ ಬದಲಾಗಿ ಈ ಹಿಂದೆ ಕೆಂದ್ರ ಸರಕಾರ ನೀಡಿದ ಮಾರ್ಗಸೂಚಿ ಅನುಸಾರ ಹೈ ರಿಸ್ಕ್‌ ದೇಶಗಳಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್‌ ಆರ್‌ ಟಿ-ಪಿಸಿಆರ್‌ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.

ಜನವರಿ 1 ರಿಂದ ಮೇಲಿನ ದೇಶಗಳಿಂದ ನಿರ್ಗಮಿಸುವ ಮೊದಲು ಪ್ರಯಾಣಿಕರ ನೆಗೆಟಿವ್ ಕೋವಿಡ್ ಆರ್‌ಟಿ-ಪಿಸಿಆರ್ ವರದಿಗಳನ್ನು ಶನಿವಾರದಂದು ಕಡ್ಡಾಯಗೊಳಿಸಿದ್ದು, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಹೆಚ್ಚಿನ ಅಪಾಯದ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ತಮ್ಮ ಚೆಕ್-ಇನ್ ವ್ಯವಸ್ಥೆಯನ್ನು ಮಾರ್ಪಡಿಸಲು ಮತ್ತು ಏರ್ ಸುವಿಧಾ ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಫಾರ್ಮ್ ಅನ್ನು ಸಲ್ಲಿಸುವ ಪ್ರಯಾಣಿಕರಿಗೆ ಮಾತ್ರ ಬೋರ್ಡಿಂಗ್ ಪಾಸ್‌ಗಳನ್ನು ನೀಡುವಂತೆ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ : Omicron sub-variant XXB.1.5: ರಾಜ್ಯಕ್ಕೂ ಕಾಲಿಟ್ಟ ಒಮಿಕ್ರಾನ್‌ ರೂಪಾಂತರಿ XXB.1.5: ರಾಜ್ಯದಲ್ಲಿ ಮೊದಲ ಕೇಸ್‌ ಪತ್ತೆ

ಇದನ್ನೂ ಓದಿ : ಕರ್ನಾಟಕದಲ್ಲಿ ಜಾರಿಯಾಗುತ್ತಾ ಲಾಕ್ ಡೌನ್‌ : ಮಾರ್ಗಸೂಚಿ ಪ್ರಕಟ, ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾ

Now the health department has withdrawn the order that quarantine is mandatory for foreign travelers. It said that the same guidelines given earlier should be followed for international passengers.

Comments are closed.