ಬೆಂಗಳೂರು : ಕೊರೊನಾ ಮಹಾಮಾರಿಯ ಅಟ್ಟಹಾಸ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ಸರಕಾರ ಹೊರ ರಾಜ್ಯಗಳಿಂದ ಬರುವವರ ಕ್ವಾರಂಟೈನ್ ಆದೇಶದಲ್ಲಿಯೂ ಬದಲಾವಣೆಗಳನ್ನು ಮಾಡಿಕೊಂಡಿದ್ದು, ಹೊಸ ಆದೇಶ ಹೊರಡಿಸಿದೆ.

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಮಹಾರಾಷ್ಟ್ರ, ದೆಹಲಿ ಹಾಗೂ ತಮಿಳುನಾಡು ರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ನಲ್ಲಿ ನೋಂದಣಿ ಮಾಡಿಸಿಕೊಳ್ಳಲೇಬೇಕು. ಅಲ್ಲದೇ ಕ್ವಾರಂಟೈನ್ ಆದೇಶದಲ್ಲಿಯೂ ಕೊಂಚ ಬದಲಾವಣೆಗಳನ್ನು ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಬರುವವರನ್ನು ಕಡ್ಡಾಯವಾಗಿ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನ ಹೋಮ್ ಕ್ವಾರಂಟೈನ್ ಮಾಡಲಾಗುತ್ತದೆ. ಇನ್ನು ತಮಿಳುನಾಡು ಹಾಗೂ ದೆಹಲಿಯಿಂದ ಬರುವವರನ್ನು 3 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಹಾಗೂ 11 ದಿನ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತದೆ.
