ಬ್ರಹ್ಮಾವರ : ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಹಾಗೂ ಎಟಿಎಂ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದ್ದು, ಕಂಟೋನ್ಮೆಂಟ್ ಝೋನ್ ಆಗಿ ಪರಿವರ್ತಿಸಲಾಗಿದೆ. ಈಗಾಗಲೇ ಬ್ಯಾಂಕ್ ನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದ್ದು, ನಾಲ್ಕು ದಿನಗಳ ಕಾಲ ಬ್ಯಾಂಕ್ ನ ಎಲ್ಲಾ ವ್ಯವಹಾರಗಳು ಸ್ಥಗಿತವಾಗಲಿದೆ. ಸಿಬ್ಬಂದಿಯೊಂದಿಗೆ ಕಳೆದೊಂದು ವಾರದಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದು, ಕೋವಿಡ್ ಪರೀಕ್ಷೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ಸಂಪರ್ಕದಲ್ಲಿ ಇರುವವರನ್ನು ಪತ್ತೆ ಹಚ್ಚಲಾಗಿದ್ದು, ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ.