Saudi Arabia bans travel : ಭಾರತ ಸೇರಿ 15 ದೇಶಗಳಿಗೆ ಪ್ರಯಾಣ ನಿಷೇಧಿಸಿದ ಸೌದಿ ಅರೇಬಿಯಾ

ರಿಯಾದ್ : ಕೋವಿಡ್-19 ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಭಾರತ ಸೇರಿ 15 ದೇಶಗಳಿಗೆ ಪ್ರಯಾಣ (Saudi Arabia bans travel) ನಿಷೇಧಿಸಿದೆ. ಭಾರತ, ಲೆಬನಾನ್, ಸಿರಿಯಾ, ಟರ್ಕಿ, ಇರಾನ್, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯಾ, ಇಥಿಯೋಪಿಯಾ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಲಿಬಿಯಾ, ಇಂಡೋನೇಷಿಯಾ, ವಿಯೆಟ್ನಾಂ, ಅರ್ಮೇನಿಯಾ, ಬೆಲಾರಸ್ ಮತ್ತು ವೆನೆಜುವೆಲಾ ದೇಶಗಳಿಗೆ ಪ್ರಯಾಣಿಸದಂತೆ ಸೌದಿ ಅರೇಬಿಯಾ ನಾಗರಿಕರಿಗೆ ಎಚ್ಚರಿಕೆ ನೀಡಿದೆ.

ಕೆಲವು ದಿನಗಳಿಂದ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಈ ನಡುವೆ ಕೆಲವು ದೇಶಗಳಲ್ಲಿ ಮಂಕಿ ಪಾಕ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ಇತರ ದೇಶಗಳಿಗೆ ಪ್ರಯಾಣಿಸದಂತೆ ಆರೋಗ್ಯ ಸಚಿವಾಲಯ ಸೂಚಿಸಿದೆ. ಈ ದೇಶಗಳಿಗೆ ಪ್ರಯಾಣಿಸಲು ಇಚ್ಚಿಸುವವರಿಗೆ ಈ ನಿಷೇಧವು ಅನ್ವಯಿಸುತ್ತದೆ. ಆದರೆ ಭಾರತೀಯರನ್ನು ಸೌದಿ ಅರೇಬಿಯಾಗೆ ಪ್ರವೇಶಿಸುವುದನ್ನು ನಿರ್ಬಂಧಿಸಿಲಾಗಿದೆಯೇ ಎಂಬುವುದರ ಕುರಿತಂತೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.

ವಿಶ್ವದ ಹಲವು ರಾಷ್ಟ್ರಗಳನ್ನು ಕೋವಿಡ್‌ ಮೂರನೇ ಅಲೆ ಬಾಧಿಸಿದೆ. ಜೊತೆಗೆ ಭಾರತದಲ್ಲಿಯೂ ಕೋವಿಡ್‌ ವೈರಸ್‌ ಸೋಂಕು ಹೆಚ್ಚುತ್ತಿದೆ. ಅರಬ್‌ ರಾಷ್ಟ್ರಗಳು ಕೋವಿಡ್‌ ಮೊದಲ ಮೂರು ಅಲೆಗಳಲ್ಲಿ ಬಹುಬೇಗನೆ ಎಚ್ಚೆತ್ತುಕೊಂಡಿದ್ದವು. ಹೀಗಾಗಿ ಕೋವಿಡ್‌ ಸೋಂಕಿನ ಹೊಡೆತದಿಂದ ಕೊಂಚ ಮಟ್ಟಿಗೆ ತಪ್ಪಿಸಿಕೊಂಡಿದ್ದವು. ಇದೀಗ ಕೋವಿಡ್‌ ನಾಲ್ಕನೇ ಅಲೆ ಹಲವು ದೇಶಗಳಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಎಚ್ಚರಿಕೆಯ ಹೆಜ್ಜೆಯನ್ನಿರಿಸಿದ್ದಾರೆ.

ಇದನ್ನೂ ಓದಿ : ಐಐಎಂನ 28 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ : 58 ವಿದ್ಯಾರ್ಥಿಗಳು ಹೋಮ್ ಐಸೋಲೇಶನ್‌

ಇದನ್ನೂ ಓದಿ : ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಸಿಎಂ ಬಸವರಾಜ್‌ ಬೊಮ್ಮಾಯಿ ಸುಳಿವು

Saudi Arabia bans travel to Including India and other 15 countries

Comments are closed.