ಕರಾವಳಿಯಲ್ಲಿ ತಗ್ಗದ ಕೊರೊನಾ ಅಬ್ಬರ : ಸದ್ಯಕ್ಕಿಲ್ಲ ಶಾಲಾರಂಭ

ಉಡುಪಿ /ಮಂಗಳೂರು : ರಾಜ್ಯದಲ್ಲಿ ಮುಂದಿನ ವಾರದಿಂದ ಶಾಲೆಗಳು ಆರಂಭಗೊಳ್ಳಲಿದೆ. ಶಿಕ್ಷಣ ಇಲಾಖೆ ಮಕ್ಕಳ ಸ್ವಾಗತಕ್ಕೆ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸದ್ಯಕ್ಕೆ ಶಾಲಾರಂಭವಾಗೋದು ಅನುಮಾನ.

ರಾಜ್ಯದಲ್ಲಿ ಶೇ.2ಕ್ಕಿಂತ ಕಡಿಮೆ ಕೊರೊನಾ ಸೋಂಕು ಇರುವ ಜಿಲ್ಲೆಗಳಲ್ಲಿ ರಾಜ್ಯ ಸರಕಾರ ಶಾಲೆಗಳನ್ನು ಆರಂಭ ಮಾಡುತ್ತಿದೆ. ಆರಂಭಿಕ ಹಂತದಲ್ಲಿ ಅಗಸ್ಟ್ 23ರಿಂದ 9 ರಿಂದ 12ನೇ ತರಗತಿ ವರೆಗೆ ಆರಂಭಗೊಳ್ಳಲಿದೆ. ಮೊದಲ ಹಂತ ಯಶಸ್ಸನ್ನು ಕಂಡ್ರೆ ಸಪ್ಟೆಂಬರ್‌ ತಿಂಗಳಿನಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ಪ್ರಾಥಮಿಕ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮಾತ್ರ ಇಳಿಕೆ ಕಾಣುತ್ತಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿತ್ಯವೂ ರಾಜ್ಯದಲ್ಲಿಯೇ ಅತ್ಯಧಿಕ ಕೊರೊನಾ ಸೋಂಕು ದಾಖಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿಯೂ ಸೋಂಕಿತರ ಸಂಖ್ಯೆ ನೂರಕ್ಕಿಂತಲೂ ಕಡಿಮೆಯಾಗುತ್ತಿಲ್ಲ. ಇನ್ನೊಂದೆಡೆಯಲ್ಲಿ ಕೇರಳದಲ್ಲಿ ಮೂರನೇ ಅಲೆಯ ಆರ್ಭಟಿಸುತ್ತಿದ್ದು, ಅವಳಿ ಜಿಲ್ಲೆಗಳಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಇದೇ ಕಾರಣಕ್ಕೆ ಜಿಲ್ಲಾಡಳಿತಗಳು ಸದ್ಯಕ್ಕೆ ಶಾಲಾರಂಭ ಮಾಡದಂತೆ ಸೂಚನೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೂಡ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಸೇರಿದಂತೆ ಪರ್ಯಾಯ ವ್ಯವಸ್ಥೆಗಳ ಮೂಲಕ ಪಾಠಬೋಧನೆಯ ಕಾರ್ಯವನ್ನು ನಡೆಸಲಾಗುತ್ತಿದೆ. ಕೊಒರನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಇದೇ ಮಾದರಿಯಲ್ಲಿಯೇ ಬೋಧನ ಕಾರ್ಯ ಮುಂದುವರಿಯಲಿದೆ. ಒಂದೊಮ್ಮೆ ಕೊರೊನಾ ಸೋಂಕಿನ ಪ್ರಮಾಣ ಶೇ.2 ಕ್ಕಿಂತ ಕಡಿಮೆಯಾದ್ರೆ ಮಾತ್ರ ಕರಾವಳಿ ಭಾಗದಲ್ಲಿ ಶಾಲೆಗಳು ಆರಂಭಗೊಳ್ಳಲಿವೆ.

ಇದನ್ನೂ ಓದಿ : 1 ರಿಂದ 8 ತರಗತಿ ಆರಂಭ : ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ : ಸಚಿವ ನಾಗೇಶ್‌

ಇದನ್ನೂ ಓದಿ : Teachers Vaccine : ಅ.23ರೊಳಗೆ ಶಿಕ್ಷಕರಿಗೆ ಲಸಿಕೆ : ಸಚಿವ ಬಿ.ಸಿ.ನಾಗೇಶ್‌

ಇದನ್ನೂ ಓದಿ : ಕರ್ನಾಟಕದಲ್ಲಿ ಅಗಸ್ಟ್‌ 23ರಿಂದ ಶಾಲಾರಂಭ : ಮಾರ್ಗಸೂಚಿಯಲ್ಲಿ ಏನಿದೆ ?

Comments are closed.