ಬೆಂಗಳೂರು : ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಮಾಜಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕೊರೊನಾ ಸೋಂಕು ಖಚಿತವಾಗಿದೆ. ಈ ಕುರಿತು ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಖಚಿತ ಪಡಿಸಿದ್ದಾರೆ.

ಕಳೆದ ಹಲವು ದಿನಗಳಿಂದಲೂ ಜ್ವರದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಅವರಿಗೆ ಮೂತ್ರದ ಸೋಂಕಿಗೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಅವರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದ್ದು, ಕೊರೊನಾ ಆಂಟಿಜೆನ್ ಟೆಸ್ಟ್ ನಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೀಗಾಗಿ ಸಿದ್ದರಾಮಯ್ಯ ಅವರೊಂದಿಗೆ ಸಂಪರ್ಕಕ್ಕೆ ಬಂದವವರು ಕ್ವಾರಂಟೈನ್ ಆಗುವಂತೆ ಯತೀಂದ್ರ ಮನವಿ ಮಾಡಿಕೊಂಡಿದ್ದಾರೆ.