ಚೆನ್ನೈ: ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಮಣ್ಯಂ ಕೊರೊನಾ ಸೋಂಕಿನಿಂದ ಜಯಿಸಿದ್ದಾರೆ. ಎಸ್ ಪಿಬಿ ಅವರಿಗೆ ಹೊಸದಾಗಿ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದ್ದು, ಇನ್ನೊಂದು ವಾರದಲ್ಲಿ ಸಂಪೂರ್ಣವಾಗಿ ಚೇತರಿಸಿಕೊಳ್ಳಲಿದ್ದಾರೆ.

ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ದಾಖಲಾಗಿರುವ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಕಳೆದ ಕೆಲ ದಿನಗಳಿಂದಲೂ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ವಿದೇಶಿ ವೈದ್ಯರಿಂದ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಆದರೆ ಶ್ವಾಸಕೋಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಸೋಂಕು ಇರುವುದರಿಂದ ಇನ್ನೊಂದು ವಾರದಲ್ಲಿ ಪೂರ್ಣವಾಗಿ ಚೇತರಿಸಿಕೊಳ್ಳಲಿದ್ದಾರೆ ಎಂದು ಎಸ್ ಪಿಬಿ ಅವರ ಪುತ್ರ ಎಸ್.ಪಿ.ಚರಣ್ ತಿಳಿಸಿದ್ದಾರೆ.

74 ವರ್ಷದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಸತತ 32 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ಬಹುಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.