SSLC ಪರೀಕ್ಷಾ ಸುರಕ್ಷತೆ 15 ದಿನದಲ್ಲಿ ತಿಳಿಯುತ್ತೆ : ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್

0

ಬೆಂಗಳೂರು : ರಾಜ್ಯ ಸರಕಾರ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಮುಗಿಸಿದೆ. ರಾಜ್ಯ ಸರಕಾರ ಸುರಕ್ಷತೆಯೊಂದಿಗೆ ಪರೀಕ್ಷೆಯನ್ನು ಮುಗಿಸಿದೆ ಎಂದು ಹೇಳುತ್ತಿದೆ. ಆದರೆ ರಾಜ್ಯ ಸರಕಾರ ಕೈಗೊಂಡಿರುವ ಸುರಕ್ಷತೆ 15 ದಿನಗಳಲ್ಲಿ ತಿಳಿಯಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೊರೊನಾ ವೈರಸ್ ಸೋಂಕಿನ ನಡುವಲ್ಲಿಯೇ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದಕ್ಕೆ ಪರ ವಿರೋಧದ ಮಾತುಗಳು ಕೇಳಿಬಂದಿತ್ತು. ಈ ನಡುವಲ್ಲೇ ರಾಜ್ಯ ಸರಕಾರ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಮುಗಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಟ್ವಿಟ್ ಮೂಲಕ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಪರೀಕ್ಷೆ ಬರೆದಿರುವ ಎಲ್ಲಾ ಮಕ್ಕಳು ಕೂಡ ಸುರಕ್ಷಿತವಾಗಿರಲಿ. ಜೂನ್ 15ರಿಂದ ಜುಲೈ 20ರ ವರೆಗೆ ದಾಖಲಾಗುವ ಕೊರೊನಾ ಸೋಂಕಿತ ಮಾಹಿತಿಯನ್ನು ಕಲೆ ಹಾಕಿ ಎಂದು ಸಲಹೆ ನೀಡಿರುವ ಸಿದ್ದರಾಮಯ್ಯ, ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಸುರಕ್ಷತೆ 15 ದಿನಗಳಲ್ಲಿ ತಿಳಿಯಲಿದೆ ಎಂದಿದ್ದಾರೆ.

Leave A Reply

Your email address will not be published.