ತೆಲಂಗಾಣ : ಕೊರೊನಾ ವೈರಸ್ ಸೋಂಕಿನ ಪ್ರಮಾಣ ಇಳಿಕೆಯಾಯ್ತು ಅನ್ನೋ ಹೊತ್ತಲ್ಲೇ ಸರಕಾರಿ ವಸತಿ ಶಾಲೆಯ 28 ವಿದ್ಯಾರ್ಥಿನಿಯರಿಗೆ ( 28 Students Corona) ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ವೈರಾದಲ್ಲಿ ನಡೆದಿದೆ
ವಸತಿ ಶಾಲೆಯಲ್ಲಿ ಒಟ್ಟಿ 575 ಮಂದಿ ವಿದ್ಯಾರ್ಥಿನಿಯರು ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿನ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಪೈಕಿ ೩೮ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸೋಂಕು ದೃಢಪಟ್ಟಿರುವ ವಿದ್ಯಾರ್ಥಿನಿಯರನ್ನು ಪ್ರತ್ಯೇಕಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.
ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿಯನ್ನು ನೀಡಿದ್ದಾರೆ. ಇನ್ನು ತೆಲಂಗಾಣದ ಆರೋಗ್ಯ ಸಚಿವರು ಪರಿಸ್ಥಿತಿಯ ಕುರಿತು ಅವಲೋಕನ ನಡೆಸಿದ್ದಾರೆ. ಶಾಲೆಯ ಸುತ್ತಮುತ್ತಲೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚನೆಯನ್ನು ನೀಡಿದ್ದಾರೆ.
ಇದನ್ನೂ ಓದಿ : Corona Vaccine : ಕೊರೊನಾ ಲಸಿಕೆ ಪಡೆದವರಿಗೆ ಮಾತ್ರ ರೇಷನ್ : ಸರಕಾರದ ಹೊಸ ಆದೇಶ
ಇದನ್ನೂ ಓದಿ : Lockdown : ದಾಖಲೆಯ ಮಟ್ಟದಲ್ಲಿ ಕೊರೊನಾ ಹೆಚ್ಚಳ : ಆಸ್ಟ್ರೀಯಾದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಣೆ
( 28 Students Corona Positive For Residential School in Telangana Khammam district)