ಹೈದರಾಬಾದ್ : ಒಂದೆಡೆ ಕೊರೊನಾ ಸೋಂಕಿನ ಅಬ್ಬರ ಕಡಿಮೆಯಾಗುತ್ತಿದೆ. ಆದರೆ ಇನ್ನೊಂದೆಡೆ ಸಲೆಬ್ರಿಟಿಗಳನ್ನು ಮಹಾಮಾರಿ ಬೆಂಬಿದಡೆ ಕಾಡುತ್ತಿದೆ. ಇದೀಗ ಖ್ಯಾತ ನಟ ಸ್ಟಾರ್ ಚಿರಂಜೀವಿ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಕೊರೊನಾ ಸೋಂಕು ಕಾಣಿಸಿಕೊಂಡಿರುವ ಕುರಿತು ಸ್ವತಃ ಮೆಗಾಸ್ಟಾರ್ ಚಿರಂಜೀವಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ತನಗೆ ಕೊರೋನಾ ಪರೀಕ್ಷೆಯ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.
ಈ ಹಿನ್ನಲೆಯಲ್ಲಿ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ತಮ್ಮ ಸಂಪರ್ಕದಲ್ಲಿದ್ದಂತ ವ್ಯಕ್ತಿಗಳು ಕೊರೋನಾ ಸೋಂಕಿನ ಲಕ್ಷಣಗಳನ್ನು ಹೊಂದಿದ್ದರೇ ಪರೀಕ್ಷೆಗೆ ಒಳಪಡುವಂತೆ ಟ್ವಿಟ್ಟರ್ ನಲ್ಲಿ ಮನವಿ ಮಾಡಿದ್ದಾರೆ.